ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್, ಶಾಲೆಗಳಿಗೆ ರಜೆ ಘೋಷಿಸಿದ ಸರಕಾರ

ಚೆನ್ನೈ : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚಿದ ಹಿನ್ನೆಲೆಯಲ್ಲಿ ತಮಿಳುನಾಡು ಸರಕಾರ ಶಾಲೆಗಳಿಗೆ ಮಾರ್ಚ್ 22ರಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ಆದೇಶ ಹೊರಡಿಸಿದೆ.

ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವಾಲಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರಗಳಿಗೆ ಎಚ್ಚರಿಸಿದೆ. ಮುಂಜಾಗ್ರತಾ ಕ್ರಮವಾಗಿ 9, 10 ಮತ್ತು 11ನೇ ತರಗತಿಗಳಿಗೆ ಮಾರ್ಚ್ 22ರಿಂದ ರಜೆ ಘೋಷಣೆಯನ್ನು ಮಾಡಿದ್ದು, ಮುಂದಿನ ಆದೇಶದ ವರೆಗೂ ರಜೆ ಮುಂದುವರಿಸೋ ಸಾಧ್ಯತೆಯಿದೆ.

ಲಾಕ್ ಡೌನ್ ವೇಳೆಯಲ್ಲಿ ಮುಚ್ಚಲಾಗಿದ್ದ ಶಾಲೆಗಳನ್ನು ಜನವರಿ 19ರ ನಂತರದಲ್ಲಿ ಹಂತ ಹಂತವಾಗಿ ತೆರೆಯಲಾಗಿತ್ತು. ಆದರೆ ಶಾಲಾರಂಭಗೊಂಡ ಮೂರೇ ತಿಂಗಳಲ್ಲಿ ಕೊರೊನಾ ಆರ್ಭಟ ಹೆಚ್ಚಳವಾಗಿದೆ. ಹೀಗಾಗಿ 9, 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಎಲ್ಲರನ್ನೂ ಉತ್ತೀರ್ಣ ಮಾಡಲು ಸರಕಾರ ನಿರ್ಧರಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ತಿಳಿಸಿದ್ದಾರೆ.

https://kannada.newsnext.live/madhyapradesh-lady-complient-arrest-crime/

Comments are closed.