ಬೆಂಗಳೂರು : ಬ್ರಿಟನ್ ನಲ್ಲಿ ಹೊಸ ತಳಿಯ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ರಾಜ್ಯಕ್ಕೆ ಬ್ರಿಟನ್ ನಿಂದ ವಾಪಾಸಾದ ವರು ಸ್ವಯಂ ಕೊರೊನಾ ಪರೀಕ್ಷೆಗೆ ಒಳಗಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ಬ್ರಿಟನ್ ನಿಂದ ಬಂದವರಲ್ಲಿ ಇದುವರೆಗೆ 26 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಎಲ್ಲರಲ್ಲಿಯೂ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ.ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೆ ಕೊರೊನಾ ಹೊಸ ತಳಿಯ ಪತ್ತೆಗಾಗಿ ಎಲ್ಲರ ಸ್ವ್ಯಾಬ್ ಗಳನ್ನು ದೆಹಲಿಗೆ ಕಳುಹಿಸಿಕೊಡಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.
ಬ್ರಿಟನ್ ನಿಂದ ವಾಪಾಸಾಗಿರುವವರ ಪೈಕಿ ಹಲವರಿಗೆ ಪರೀಕ್ಷೆಯನ್ನು ಮಾಡಲಾಗಿದೆ. ಅದರಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ. ಹೀಗಾಗಿ ಯು.ಕೆ.ಯಿಂದ ವಾಪಾಸಾದವರು ಸ್ವಯಂ ಪರೀಕ್ಷೆಗೆ ಒಳಗಾಗಬೇಕು. ಮೊಬೈಲ್ ಪೋನ್ ಗಳನ್ನು ಸ್ವಿಚ್ ಆಪ್ ಮಾಡಿಕೊಳ್ಳುವುದು ಅಪರಾಧವಾಗುತ್ತದೆ. ಅಲ್ಲದೇ ಪೋನ್ ಟ್ರೇಸ್ ಆಗದವರ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.