ಬಾರದ ಲೋಕಕ್ಕೆ ಪಯಣಿಸಿ ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ

ಉಡುಪಿ : ನಾಡಿನ ಹಿರಿಯ ವಿದ್ವಾಂಸ ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ(84 ವರ್ಷ) ವಿಧಿವಶರಾಗಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಉಡುಪಿಯ ಅಂಬಲಪಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಹಲವು ಸಮಯದಿಂದಲೂ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬನ್ನಂಜೆ ಗೋವಿಂದಾಚಾರ್ಯರು ಯಾವುದೇ ಕಾರ್ಯಕ್ರಮ ಗಳಲ್ಲಿಯೂ ಭಾಗವಹಿಸುತ್ತಿರಲಿಲ್ಲ. ಬನ್ನಂಜೆಯವರ ಹಿರಿಯ ಮಗ ಕೆಲ ದಿನಗಳ ಹಿಂದೆಯಷ್ಟೇ ನಿಧನರಾಗಿದ್ದು, ಮನೆಯಲ್ಲಿ 12ನೇ ದಿನದ ವಿಧಿ ವಿಧಾನ ನಡೆಸಲು ತಯಾರಿ ನಡೆಸಲಾಗುತ್ತಿದೆ. ಈ ನಡುವಲ್ಲೇ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರು ಮಾಧ್ವತತ್ವದಲ್ಲಿ ಅಮೋಘ ಪಾಂಡಿತ್ಯ ಸಾಧಿಸಿರುವ ಗೋವಿಂದಾಚಾರ್ಯರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಾಣಭಟ್ಟನ ಕಾದಂಬರಿ, ಕಾಳಿದಾಸನ ಶಾಕುಂತಲಾ, ಶೂದ್ರಕನ ಮೃಚ್ಚಕಟಿಕ ಸೇರಿದಂತೆ ಹಲವು ಕೃ ತಿಗಳನ್ನು ಅನುವಾದ ಮಾಡಿದ್ದಾರೆ. ಶ್ರೀ ತ್ರಿವಿಕ್ರಮಾಚಾರ್ಯದಾಸರ ಆನಂದಮಾಲ, ತ್ರಿವಿಕ್ರಮ ಪಂಡಿತರ ವಾಯುಸ್ತುತಿ, ವಿಷ್ಣುಸ್ತುತಿಗೆ ಟಿಪ್ಪಣಿ ಬರೆದಿದ್ದಾರೆ. ಆರು ಉಪನಿಷತ್ತುಗಳಿಗೆ ಟೀಕೆಗಳನ್ನು ಬರೆದಿದ್ದು, ಮಧ್ವಾಚಾರ್ಯರ ಮಹಾಭಾರತ ತಾತ್ಪರ್ಯದ ಟೀಕಾ ಕೃತಿಯಾದ ಯಮಕ ಭಾರತ, ಭಾಗವ ತಾತ್ಪರ್ಯ ಕೃತಿಗಳಿಗೆ ಟಿಪ್ಪಣಿ ಮರೆದಿದ್ದಾರೆ. ಪುರುಷ ಸೂಕ್ತ, ಶ್ರೀಮದ್ಬಗವದ್ಗೀತೆ, ಶ್ರೀ ಸೂಕ್ತ, ಶಿವಸೂಕ್ತ, ನರಸಿಂಹ ಸೂಕ್ತ, ತಂತ್ರಸಾರ ಸಂಗ್ರಹ, ಮಧ್ವಾಚಾರ್ಯರ ಮಧ್ವರಾಮಾಯಣ, ರಾಜರಾಜೇಶ್ವರಿ ಯತಿಗಳ ಮಂಗಲಾಷ್ಟಕ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಜಿ.ವಿ.ಅಯ್ಯರ್ ಅವರ ಸಂಸ್ಕೃತ ಚಲನಚಿತ್ರ ಶ್ರೀಶಂಕರಾಚಾರ್ಯ, ಶ್ರೀ ಮಧ್ವಾಚಾರ್ಯ, ಶ್ರೀ ರಾಮಾನುಜಾಚಾರ್ಯ ಚಲನಚಿತ್ರಗಳಲ್ಲಿ ಸಂಪನ್ಮೂಲಕ ವ್ಯಕ್ತಿಗಳಾಗಿ ಕೆಲಸ ಮಾಡಿದ್ದಾರೆ. ಕನ್ನಡ ಖ್ಯಾತ ನಟ ಡಾ.ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮಿಕ ಗುರುವಾಗಿದ್ದರು. ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಹಲವು ಕಂಬನಿ ಮಿಡಿದಿದ್ದಾರೆ.

Comments are closed.