ಬೆಂಗಳೂರು : ತಮಿಳುನಾಡು ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಹೀಗಾಗಿ ಶಶಿಕಲಾ ಜೈಲಿನಿಂದ ಬಿಡುಗಡೆಯಾದ್ರೂ ಆಸ್ಪತ್ರೆಯಲ್ಲಿಯೇ ಉಳಿಬೇಕಾಗಿದೆ.
ಇದೇ ಜ. 27ರಂದು ಪರಪ್ಪನ ಆಗ್ರಹಾರದಿಂದ ಶಶಿಕಲಾ ಬಿಡುಗಡೆಯಾಗಬೇಕಿತ್ತು. ಆದರೆ ಜೈಲಿನಲ್ಲಿ ತೀವ್ರ ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಅವರನ್ನು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿರುವುದಾಗಿ ಆಸ್ಪತ್ರೆ ಸಂಜೆ ಬಿಡುಗಡೆ ಮಾಡಿದ್ದ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿತ್ತು, ಆದರೆ ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಫಟ್ಟಿದೆ.
ಶಶಿಕಲಾ ಅವರಿಗೆ ಕೋವಿಡ್ ಸೋಂಕು ಇರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು 10 ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಬೇಕಾಗಿದೆ. ಹೀಗಾಗಿ ಅವರು ಜೈಲಿನಿಂದ ಬಿಡುಗಡೆಯಾದರೂ ಕೂಡ ಆಸ್ಪತ್ರೆಯಿಂದ ಬಿಡುಗಡೆಯಾಗುವುದು ತಡವಾಗಲಿದೆ.
ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಶಿಕಲಾ ಅವರ ಭೇಟಿಗೆ ಯಾರಿಗೂ ಅವಕಾಶವನ್ನು ನೀಡಲಾಗುತ್ತಿಲ್ಲ. ಶಶಿಕಲಾ ಕುಟುಂಬಸ್ಥರು ನಿನ್ನೆಯಿಂದಲೇ ಆಸ್ಪತ್ರೆಯಲ್ಲಿ ಕಾಯುತ್ತಿದ್ದಾರೆ. ಆದರೆ ಯಾರಿಗೂ ಕೂಡ ಭೇಟಿಗೆ ಅವಕಾಶ ಕಲ್ಪಿಸಿಲ್ಲ. ಅಲ್ಲದೇ ವಿಕ್ಟೋರಿಯಾ ಆಸ್ಪತ್ರೆಯ ಸುತ್ತಲೂ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.