ಬೆಂಗಳೂರು : ಜೈಲಿನಿಂದ ಬಿಡುಗಡೆಯಾಗಿದ್ದರು ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಕೆಲ ವರ್ಷಗಳಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಶಿಕ್ಷೆಯನ್ನು ಪೂರ್ಣಗೊಳಿಸಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಕಳೆದ 8 ದಿನಗಳಿಂದಲೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಇದೀಗ ಕೊರೊನಾ ವೈರಸ್ ಸೋಂಕಿನಿಂದ ಶಶಿಕಲಾ ಗುಣಮುಖರಾಗಿದ್ದಾರೆ.
ವೈದ್ಯರ ಸೂಚನೆಯ ಹಿನ್ನೆಲೆಯಲ್ಲಿ ಶಶಿಕಲಾ ನಟರಾಜ್ ಕೆಲ ದಿನಗಳ ಕಾಲ ಬೆಂಗಳೂರಿನಲ್ಲಿಯೇ ಕ್ವಾರಂಟೈನ್ ಗೆ ಒಳಪಡಲಿದ್ದಾರೆ. ಬೆಂಗಳೂರಿನ ಹೊರವಲಯದ ಶಶಿಕಲಾ ನಟರಾಜನ್ ಅವರ ಆಪ್ತರೊಬ್ಬರಿಗೆ ಸೇರಿದ ಫಾರ್ಮ್ ಹೌಸ್ ನಲ್ಲಿ ಉಳಿದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಶಶಿಕಲಾ ನಟರಾಜನ್ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾಗತಕ್ಕೆ ವಿಕ್ಟೋರಿಯಾ ಆಸ್ಪತ್ರೆಯ ಮುಂಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.