Shikhar Dhawan Captain: ಮತ್ತೆ ಕ್ಯಾಪ್ಟನ್ ಚೇಂಜ್, ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಶಿಖರ್ ಧವನ್ ಟೀಮ್ ಇಂಡಿಯಾ ನಾಯಕ

ಬೆಂಗಳೂರು: ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಏಕದಿನ ಸರಣಿಯನ್ನಾಡಲಿರುವ (India tour of West Indies) ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಅನುಭವಿ ಎಡಗೈ ಓಪನರ್ ಶಿಖರ್ ಧವನ್ ಟೀಮ್ ಇಂಡಿಯಾವನ್ನು (Shikhar Dhawan Captain Team India) ಮುನ್ನಡೆಸಲಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಮ್ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ರಿಷಭ್ ಪಂತ್ ಮತ್ತು ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ (Rohit, Virat are rested). ಈ ನಾಲ್ವರೂ ಆಟಗಾರರು ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ. ಕೆ.ಎಲ್ ರಾಹುಲ್ ಸ್ಪೋರ್ಟ್ಸ್ ಹರ್ನಿಯಾಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ಕಾರಣ ಆಯ್ಕೆಗೆ ಲಭ್ಯವಿಲ್ಲ. ಹೀಗಾಗಿ ಶಿಖರ್ ಧವನ್”ಗೆ ನಾಯಕ ಪಟ್ಟ ಕಟ್ಟಲಾಗಿದ್ದು, ಆಲ್ರೌಂಡರ್ ರವೀಂದ್ರ ಜಡೇಜಾಗೆ ಉಪನಾಯಕನ ಹೊಣೆ ವಹಿಸಲಾಗಿದೆ.

ಶಿಖರ್ ಧವನ್ ನಾಯಕತ್ವದ ಭಾರತ ತಂಡ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.
ಏಕದಿನ ಸರಣಿಯ ವೇಳಾಪಟ್ಟಿ
ಮೊದಲ ಏಕದಿನ: ಜುಲೈ 22 (ಕ್ವೀನ್ಸ್ ಪಾರ್ಕ್ ಓವಲ್)
2ನೇ ಏಕದಿನ: ಜುಲೈ 24 (ಪೋರ್ಟ್ ಆಫ್ ಸ್ಪೇನ್)
3ನೇ ಏಕದಿನ: ಜುಲೈ 27 (ಟ್ರಿನಿಡಾಡ್)

ಏಕದಿನ ಸರಣಿಯ ನಂತರ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದ್ದು, ಆ ಸರಣಿಗೆ ಟೀಮ್ ಇಂಡಿಯಾವನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಇದನ್ನೂ ಓದಿ : Joe Root Beat Virat Kohli : ಕಿಂಗ್ ಕೊಹ್ಲಿಯನ್ನು Beat ಮಾಡಿದ ಇಂಗ್ಲೆಂಡ್ ರನ್ ಮಷಿನ್ !

ಇದನ್ನೂ ಓದಿ : Karnataka Cricket : ಕೋಚ್‌ಗಳನ್ನು ಬದಲಿಸಲಿದ್ದರೆ ಕರ್ನಾಟಕ ರಣಜಿ ತಂಡಕ್ಕೆ ಉಳಿಗಾಲವಿಲ್ಲ !

Shikhar Dhawan Captain Team India tour of West Indies

Comments are closed.