ಉಡುಪಿ : ಶಿರ್ವದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ.ಮಹೇಶ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿ.ಸೋಜಾ ಎಂಬಾತನನ್ನು ಶಿರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 11 ರಂದು ರಾತ್ರಿ ಫಾ.ಮಹೇಶ್ ಡಿಸೋಜಾ ಅವರು ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಫಾದರ್ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಕುರಿತು ಸ್ವಯಂ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆತ್ಮಹತ್ಯೆ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ,
ಮಾರ್ಚ್ 11 ರಂದು ರಾತ್ರಿ 8.30ರ ಸುಮಾರಿಗೆ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾ ಫಾ.ಮಹೇಶ್ ಡಿಸೋಜಾ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಚರ್ಚ್ ಗೆ ನುಗ್ಗುವುದಾಗಿ ಬೆದರಿಕೆಯೊಡ್ಡಿದ್ದ. ಹೀಗಾಗಿಯೇ ಫಾ.ಮಹೇಶ್ ಡಿಸೋಜಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರೋ ಕಾಪು ವೃತ್ತ ನಿರೀಕ್ಷಕರಾದ ಮಹೇಶ್ ಪ್ರಸಾದ್ ತನಿಖೆ ನಡೆಸಿದ್ದರು. ಪ್ರಕರಣ ಕುರಿತು ವಿದಿವಜ್ಞಾನ ಪ್ರಯೋಗಾಲಯದ ವರದಿ ಕೈ ಸೇರುತ್ತಿದ್ದಂತೆಯೇ ಆರೋಪಿ ಡೇವಿಡಿ ಡಿಸೋಜಾ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ಮಾರ್ಚ್ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಫಾ.ಮಹೇಶ್ ಡಿಸೋಜಾ ಆತ್ಮಹತ್ಯೆ ಪ್ರಕರಣ : ಗ್ರಾ.ಪಂ.ಅಧ್ಯಕ್ಷ ಡೇವಿಡ್ ಡಿಸೋಜಾ ಬಂಧನ
- Advertisement -
RELATED ARTICLES