ಸಾಗರ : ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಸರಕಾರಿ ಆಸ್ಪತ್ರೆಯ ಬಳಿಯಿರುವ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ನಡೆದಿದೆ.
ರಮೇಶ್ ಎಂಬವರು ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡು ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆಯಲ್ಲಿ ಒಮ್ಮಿಂದೊಮ್ಮೆಲೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಚಾಲಕ ರಮೇಶ್ ಕಾರನ್ನು ನಿಲ್ಲಿಸಿ ಕೆಳಗೆ ಇಳಿಯುತ್ತಿದ್ದಂತೆಯೇ ಸ್ಥಳೀಯರು ನೀರು ಸುರಿದು ಬೆಂಕಿ ನಂದಿಸಲು ಯತ್ನಿಸಿದ್ರೂ ಫಲಕಾರಿಯಾಗಲಿಲ್ಲ. ನಂತರದಲ್ಲಿ ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಘಟನೆಗೆ ಕಾರಣತಿಳಿದು ಬಂದಿಲ್ಲ.