ಸಾಮೂಹಿಕ ಅತ್ಯಾಚಾರದ ಬಳಿಕ ಮಹಿಳೆಯನ್ನು ಬೆಂಕಿ ಹಚ್ಚಿ ಸುಟ್ಟ ತಂದೆ ಮಗ..!

ಲಕ್ನೋ : ಮಹಿಳೆಯೋರ್ವರು ತಾಯಿಯ ಮನೆಯಿಂದ ಹಿಂದುರುಗುತ್ತಿದ್ದ ವೇಳೆಯಲ್ಲಿ ತಂದೆ ಮಗ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ನೈಮಿಶರಣ್ಯದ ಮಿಶ್ರಿಖ್ ಪ್ರದೇಶ ನಿವಾಸಿಯಾಗಿರುವ 30 ವರ್ಷದ ಮಹಿಳೆ ಸಿಧೌಲಿಯಲ್ಲಿರುವ ತನ್ನ ತಾಯಿಯ ಮನೆಯಿಂದ ವಾಪಾಸಾಗುತ್ತಿದ್ದಳು. ಈ ವೇಳೆಯಲ್ಲಿ ಮಹಿಳೆ ವ್ಯಕ್ತಿಯೋರ್ವನಿಗೆ ಲಿಫ್ಟ್ ಪಡೆದಿದ್ದಾಳೆ. ವ್ಯಕ್ತಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತನ್ನ ತಂದೆಯ ಜೊತೆಗೂಡಿ ಅತ್ಯಾಚಾರವೆಸಗಿದ್ದಾನೆ.

ಮಹಿಳೆಯನ್ನು ಬೆಂಕಿ ಹಚ್ಚಿ ಕೊಲ್ಲಲ್ಲು ಯತ್ನಿಸಿದ್ದಾರೆ. ಆದರೆ ಮಹಿಳೆ ಕಾಮುಕರಿಂದ ತಪ್ಪಿಸಿಕೊಂಡು ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮಹಿಳೆಯ ದೇಹವು ಶೇ.30 ರಷ್ಟು ಸುಟ್ಟು ಹೋಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದ್ದು, ಮಹಿಳೆ ಘಟನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿದ್ದಾರೆ. ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಬಂಧಿತರರಿಂದ ಮಾಹಿತಿಯನ್ನು ಪಡೆಯಲಾಗುತ್ತಿದೆ ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಆರ್ ಪಿ ಸಿಂಗ್ ಮಾಹಿತಿ ನೀಡಿದ್ದಾರೆ.

Comments are closed.