ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರ್ಮಣ್ಯಂ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ

0

ಚೆನ್ನೈ: ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ 74 ವರ್ಷದ ಖ್ಯಾತ ಗಾಯಕ ಎಸ್,ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಕಳೆದ ರಾತ್ರಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಸ್ಥಳಾಂತರ ಮಾಡಲಾಗಿದೆ. ಎಸ್ ಪಿಬಿ ಅವರಿಗೆ ಲೈಫ್ ಸಪೋರ್ಟ್ ಅಳವಡಿಸಲಾಗಿದೆ.

ಈ ಹಿಂದೆ ಕೊರೋನಾಗೆ ತುತ್ತಾಗಿದ್ದಾಗ ಅವರು ವಿಡಿಯೋ ಮಾಡಿ ನನ್ನ ಕುಟುಂಬದ ಹಿತದೃಷ್ಟಿಯಿಂದ ನಾನು ಸ್ವಯಂ ಆಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯೊಂದಿಗೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದರು.

Leave A Reply

Your email address will not be published.