ರಾಜ್ಯದಲ್ಲಿ ಎಸ್ಎಸ್ಎಲ್.ಸಿ ಪರೀಕ್ಷೆಗೆ ಹೈಕೋರ್ಟ್ ಅಸ್ತು…! ಪಿಐಎಲ್ ಅರ್ಜಿ ವಜಾ…!!

ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆಯೂ ನಡೆಸಲು ಉದ್ದೇಶಿಸಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದ್ದು, ಸೂಕ್ತ ನಿಯಮಗಳ ಜೊತೆ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವಸ್ತುನಿಷ್ಠ ಮಾದರಿಯಲ್ಲಿ ಮೂರುದಿನಗಳ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲು ನಿರ್ಧರಿಸಿತ್ತು. ಅಂತೆಯೇ ಜುಲೈ 19 ರಿಂದ 22 ರವರೆಗೆ ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು.

ಆದರೆ ದ್ವಿತೀಯ ಪಿಯುಸಿ ರದ್ದುಗೊಳಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆಯೋಜಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪರೀಕ್ಷೆ ಗೆ ಗ್ರೀನ್ ಸಿಗ್ನಲ್ ನೀಡಿದ್ದು, ಅರ್ಜಿ ವಜಾಗೊಳಿಸಿದೆ.

ನ್ಯಾಯಮೂರ್ತಿ ನಾಗರತ್ನಾ ಹಾಗೂ ನ್ಯಾಯಮೂರ್ತಿ ಸಂಜೀವ್ ಕುಮಾರ್ ಇದ್ದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. ಪ್ರಸ್ತುತ ರಾಜ್ಯದಲ್ಲಿ ಪಾಸಿಟಿವಿ ರೇಟ್ 1.48 ರಷ್ಟಿದೆ. ಕೊರೋನಾ ಎರಡನೇ ಅಲೆಯ ಪ್ರಭಾವ ಕಡಿಮೆ ಇದೆ.

ಹೀಗಾಗಿ ವಿದ್ಯಾರ್ಥಿಗಳ ಭವಿಷ್ಯದ ನಿಟ್ಟಿನಲ್ಲಿ ಪರೀಕ್ಷೆ ನಡೆಸುವುದು ಸೂಕ್ತ ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೇ ಯಾವುದೇ ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆ ಬರೆಸಬಾರದು ಎಂದು ಸೂಚಿಸಿರುವ ನ್ಯಾಯಾಲಯ ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರ ರೂಪಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಆದೇಶಿಸಿದೆ.  

Comments are closed.