ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಾರ್ಚ್ 27ರಂದು ನಿಗದಿಯಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮುಂದೂಡಿಕೆಯಾಗಿದೆ. ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲಾ ಪರೀಕ್ಷೆಯನ್ನು ಮೂಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಕೇವಲ ಎಸ್ಎಸ್ಎಲ್ ಸಿ ಮಾತ್ರವಲ್ಲ, ಮಾರ್ಚ್ 27ರಂದು ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೊರೊನಾ ಪೀಡಿತರ ಸಂಖ್ಯೆ 20ಕ್ಕೆ ಏರಿಕೆಯಾಗಿತ್ತು. ಅಲ್ಲದೇ ಸೋಂಕಿತರ ಸಂಖ್ಯೆಯೂ ದಿನೇ ದಿನೇ ಹೆಚ್ಚಳವಾಗುತ್ತಿದೆ. ಮಾರ್ಚ್ 27ರಂದು ನಿಗದಿಯಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸುಮಾರು 7 ಲಕ್ಷ ಮಂದಿ ಪರೀಕ್ಷೆ ಬರೆಯುವವರಿದ್ದರು. ಇಷ್ಟೊಂದು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುವ ಸಂರ್ಭದಲ್ಲಿ ಸೋಂಕು ಮನೆಯಿಂದ ಮನೆಗೆ ಹರಡುವ ಸಾಧ್ಯತೆಯಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಈಗಾಗಲೇ 1ನೇ ತರಗತಿಯಿಂದ 9ನೇ ತರಗತಿಯವರೆಗಿನ ಪರೀಕ್ಷೆಗಳನ್ನು ರದ್ದುಪಡಿಸಿ, ರಜೆ ಘೋಷಿಸಲಾಗಿದೆ. ಆದರೆ ಪಿಯುಸಿ ಪರೀಕ್ಷೆ ಈಗಾಗಲೇ ಆರಂಭಗೊಂಡಿರುವುದರಿಂದ ಸರಕಾರಕ್ಕೆ ಯಾವುದೇ ನಿರ್ಣಯಕೈಗೊಳ್ಳಲು ಸಾಧ್ಯವಾಗಿರಲಿಲ್ಲ.