SSLC ಪರೀಕ್ಷೆ : ಮಾರ್ಗಸೂಚಿ ಹೊರಡಿಸಿದ ಪ್ರೌಢಶಾಲಾ ಪರೀಕ್ಷಾ ಮಂಡಳಿ

ಬೆಂಗಳೂರು : ರಾಜ್ಯದಲ್ಲಿ ಪ್ರಸಕ್ತ ಸಾಲಿನ  ಎಸ್ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜ್ಯ ಪ್ರೌಢಶಾಲಾ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ನು ಹೊರಡಿಸಿದೆ.

2012 ನೇ ಜೂನ್ ನಲ್ಲಿ ನಡೆಯುವ ಎಸ್ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆ ಮತ್ತು ಕಾಲೇಜುಗಳಿಂದ  ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಸಗಿಯಾಗಿ ಪರೀಕ್ಷೆಯನ್ನು ಬರೆಯುವವರು ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ಕೂಡ ಪರೀಕ್ಷೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿನ ಜೂನ್ 2021 ರ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF) ಖಾಸಗಿ ಅಭ್ಯರ್ಥಿಗಳ (CCEPF)  ಮತ್ತು ಪುನರಾವರ್ತಿ ಅಭ್ಯರ್ಥಿಗಳ( CCERR, CCEPR, NSR, NSPR) ವಿವರಗಳನ್ನು ಮಂಡಳಿಯ ಅಧಿಕೃತ ವೆಬ್ ಸೈಟ್ : www.sslc.karnataka.gov.in ಜಾಲತಾಣದ ಮೂಲಕ ಶಾಲಾ ಲಾಗಿನ್ ಮೂಲಕ ಅಪ್ ಲೋಡ್ ಮಾಡಲು ಸೂಚನೆ ನೀಡಲಾಗಿದೆ.

Comments are closed.