SSLC EXMAS : ಮಂಗಳೂರಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿಅವಘಡ : ತಪ್ಪಿದ ಭಾರೀ ದುರಂತ

ಮಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿಅಪಘಡ ಸಂಭವಿಸಿದ್ದು, ಶಿಕ್ಷಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಬಬ್ಬುಕಟ್ಟೆಯಲ್ಲಿನ ಖಾಸಗಿ ಶಾಲೆಯಲ್ಲಿ ನಡೆದಿದೆ.

https://www.youtube.com/watch?v=hHFNW_iGkwI

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಶಾಲೆಯ ಲ್ಯಾಬ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲದೇ ಲ್ಯಾಬ್‌ ಸಮೀಪದಲ್ಲಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರವಿದ್ದು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳದಲ್ಲಿದ್ದ ಶಿಕ್ಷಕರು ಎಚ್ಚೆತ್ತುಕೊಂಡಿದ್ದಾರೆ. ಕೂಡಲೇ ಮಕ್ಕಳನ್ನು ಬೇರೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದಲೇ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಆದರೆ ಶಿಕ್ಷಕರ ಸಮಯ ಪ್ರಜ್ಞೆಯಿಂದ ಬೇರೊಂದು ಕಟ್ಟಡದಲ್ಲಿ ಪರೀಕ್ಷೆ ನಡೆದಿದ್ದು, ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದ ಪರೀಕ್ಷಾ ಕೇಂದ್ರಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡಿದ್ದಾರೆ.

Comments are closed.