ಬೆಂಗಳೂರು : ಕರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 1 ರಿಂದ 8ನೇ ತರಗತಿಯ ವರೆಗೆ ಶೈಕ್ಷಣಿಕ ವರ್ಷ ಇಲ್ಲ. ಆದರೆ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ನಡೆಸುತ್ತೇವೆ. ಅಲ್ಲದೇ ಸದ್ಯದಲ್ಲಿಯೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ತಜ್ಞರು, ಆರೋಗ್ಯ ಸಚಿವರ ಸೂಚನೆಯಂತೆ ಡಿಸೆಂಬರ್ ಅಂತ್ಯದವರೆಗೂ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳು ತೆರೆಯುವುದಿಲ್ಲ. ಡಿಸೆಂಬರ್ ನಂತರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಲಾಗುವುದು. ಈ ವರ್ಷ 1ರಿಂದ 8ನೇ ತರಗತಿವರೆಗೆ ಶಾಲೆ ತೆರೆಯುವ ಬಗ್ಗೆ ಯೋಚನೆಯೇ ಇಲ್ಲ. ಆದರೆ‘ಝಿರೋ ಇಯರ್’ಎಂದು ಪರಿಗಣಿಸಲಾಗಲ್ಲ, ಬೇರೆ ಬೇರೆ ವಿಧಗಳಲ್ಲಿ ತರಗತಿಗಳು ನಡೆಯುತ್ತದೆ ಎಂದರು.
ಇನ್ನು ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಬೋರ್ಡ್ ಪರೀಕ್ಷೆ ಇರುವುದರಿಂದ ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು.10ನೇ ತರಗತಿಯಲ್ಲಿ 9,59,566 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಹೀಗಾಗಿ ಮಕ್ಕಳಿಗೆ ಪ್ರೇರಣೆ, ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ತಿಳಿಸಿದರು.