ಎಸ್ಎಸ್ಎಲ್ ಸಿ ವಿಜ್ಞಾನ ಪತ್ರಿಕೆಯೂ ಲೀಕ್ ! Hello ಆಪ್ ನಲ್ಲಿ ಹರಿದಾಡುತ್ತಿದೆ ಪ್ರಶ್ನೆಪತ್ರಿಕೆ

0

ಬೆಂಗಳೂರು : ರಾಜ್ಯದಾದ್ಯಂತ ಪ್ರೌಢಶಾಲಾ ಶಿಕ್ಷಣ ಮಂಡಳಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುತ್ತಿದೆ. ಸೋಮವಾರ ವಿಜ್ಞಾನ ಪರೀಕ್ಷೆ ನಡೆಯಲಿದೆ. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ‘ಹಲೋ’ ಸೋಶಿಯಲ್ ಮೀಡಿಯಾ ಆಪ್ ನಲ್ಲಿ ಹರಿದಾಡುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಪೋಷಕರಿಗೆ ಆತಂಕವನ್ನು ಮೂಡಿಸಿದೆ.

ಎಸ್ಎಸ್ ಎಲ್ ಸಿ ಪೂರ್ವ ತಯಾರಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿದೆ. ಆದರೆ ಈ ಬಾರಿ ಹಲವು ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದೆ. ಸಮಾಜ ವಿಜ್ಞಾನ, ಹಿಂದಿ, ಕನ್ನಡ ಪ್ರಶ್ನೆ ಪತ್ರಿಕೆಗಳು ಹಲೋ ಆಪ್ ನಲ್ಲಿ ಹರಿದಾಡಿದ್ದವು. ಇದೀಗ ಸೋಮವಾರ ನಡೆಯಬೇಕಿದ್ದ ವಿಜ್ಞಾನ ಪ್ರಶ್ನೆ ಪತ್ರಿಕೆ ಕೂಡ ಲೀಕ್ ಆಗಿದೆ. 80 ಅಂಕಗಳಿರುವ ಪ್ರಶ್ನೆ ಪತ್ರಿಕೆಯನ್ನು ನಿನ್ನೆಯಿಂದಲೇ ಸೋಶಿಯಲ್ ಮೀಡಿಯಾದಲ್ಲಿ ರಾಜಾರೋಷವಾಗಿ ಹರಿಬಿಟ್ಟಿದ್ದಾರೆ.


ಪ್ರಶ್ನೆ ಪತ್ರಿಕೆಗಳನ್ನು ಎಲ್ಲಾ ಜಿಲ್ಲೆಗಳಲ್ಲಿಯೂ ಬಿಗಿ ಭದ್ರತೆಯಲ್ಲಿ ಇಡಲಾಗುತ್ತಿದೆ. ಪ್ರೌಢಶಾಲಾ ಶಿಕ್ಷಣ ಮಂಡಳಿ ಕೂಡ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವುದಾಗಿ ಹೇಳಿಕೊಂಡಿದೆ. ಆದರೆ ಇಷ್ಟೊಂದು ಭದ್ರತೆಯ ನಡುವಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಪ್ರಶ್ನೆ ಪತ್ರಿಕೆ ಎಲ್ಲಿಂದ ಸೋರಿಕೆಯಾಗಿದೆ ಅನ್ನೋ ಬಗ್ಗೆ ತನಿಖೆ ನಡೆಯಬೇಕಿದೆ. ಸದ್ಯದಲ್ಲಿ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ನಡೆಯಲಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕದಲ್ಲಿದ್ದಾರೆ.

ಪ್ರೌಢಶಾಲಾ ಪರೀಕ್ಷಾ ಮಂಡಳಿಯ ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಪಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ಯಾವ ಜಿಲ್ಲೆಯಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ ಅನ್ನೋ ಬಗ್ಗೆ ಶಿಕ್ಷಣ ಇಲಾಖೆ ಕ್ರಮವಹಿಸಬೇಕಿದೆ.

ಈ ಬಾರಿ ಮೂರ್ನಾಲ್ಕು ಪ್ರಶ್ನೆ ಪತ್ರಿಕೆಗಳು ಲೀಕ್ ಆಗುತ್ತಿದ್ದರೂ ಕೂಡ ಪ್ರೌಢ ಶಾಲಾ ಶಿಕ್ಷಣ ಇಲಾಖೆಯ ಸಚಿವರು, ಅಧಿಕಾರಿಗಳು ಮೌನವಹಿಸಿದ್ದಾರೆ. ಇನ್ನಾದ್ರೂ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಬಗ್ಗೆ ಕ್ರಮಕೈಗೊಂಡು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರಿಗೆ ತಕ್ಕ ಶಾಸ್ತಿ ಮಾಡಬೇಕಾದ ಅಗತತ್ಯವಿದೆ.

Leave A Reply

Your email address will not be published.