ಬೆಂಗಳೂರು : ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರ ಹೆಸರಿನಲ್ಲಿ ನಕಲಿ ಹೆಡ್ ಸೃಷ್ಟಿಸಿ ಪೋರ್ಜರಿ ಮಾಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೈದ್ರರಾಬಾದ್ ಮೂಲಕ ಟೆಕ್ಕಿ ಎಲ್.ಸಾಯಿಕೃಷ್ಣ ಎಂದು ಗುರುತಿಸಲಾಗಿದೆ.

Offers near byಎಂಬ ಮೊಬೈಲ್ ಅಪ್ಲಿಕೇಶನ್ ಬ್ರ್ಯಾಂಡ್ ಅಂಬಾಸಿಡರ್ ಆಗುವಂತೆ ಟೆಕ್ಕಿ ಸಾಯಿಕೃಷ್ಣ ಕಳೆದ ವರ್ಷ ಟಾಲಿವುಡ್ ಸ್ಟಾರ್ ವಿಜಯದೇವರಕೊಂಡ ಅವರಿಗೆ ಸುಧಾಮೂರ್ತಿ ಅವರ ಹೆಸರಿನಲ್ಲಿ ನಕಲಿ ಹೆಡ್ ಸೃಷ್ಟಿಸಿ ಪೋರ್ಜರಿ ಸಹಿ ಮಾಡಿ ರಿಜಿಸ್ಟರ್ ಪೋಸ್ಟ್ ಮಾಡಿದ್ದ. ಈ ಸಂಬಂಧ ಫೆ.26 ರಂದು ಆರೋಪಿ ವಿರುದ್ದ ಕ್ರಮಕೈಗೊಳ್ಳುವಂತೆ ಇನ್ಫೋಸಿಸ್ ಪೌಂಡೇಷನ್ ಕಚೇರಿಯ ಲೆ.ಕರ್ನಲ್ ರಮೇಶ್ ಎಂಬುವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ಐಪಿಸಿ 419, 465,471,468 ಅಡಿ ಕೇಸ್ ದಾಖಲಾಗಿತ್ತು. ಇದೀಗ ಜಯನಗರ ಠಾಣೆಯ ಪೊಲೀಸರು ಆರೋಪಿ ಎಲ್.ಸಾಯಿಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.