ಸಂಡೇ ಲಾಕ್ ಡೌನ್ ಇರಲ್ಲ, ಶನಿವಾರದ ರಜೆಯೂ ರದ್ದು : ರಾಜ್ಯ ಸರಕಾರದಿಂದ ಮಹತ್ವದ ಆದೇಶ

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಿಕೆಯಾಗಿದ್ದ ಭಾನುವಾರದ ಲಾಕ್ ಡೌನ್ ನ್ನು ರಾಜ್ಯ ಸರಕಾರ ರದ್ದುಗೊಳಿಸಿ ಮಹತ್ವದ ಆದೇಶವನ್ನು ಹೊರಡಿಸಿದೆ.

ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದಂತೆಯೇ ರಾಜ್ಯ ಸರಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಕೇಂದ್ರ ಸರಕಾರ ಅನ್ ಲಾಕ್ 3.0 ಮಾರ್ಗಸೂಚಿಯನ್ನು ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಸರಕಾರ ಮಹತ್ವದ ನಿರ್ಣಯವನ್ನು ಕೈಗೊಂಡಿದೆ.

ಇನ್ನು ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಶನಿವಾರ ಸರಕಾರ ನೌಕರರಿಗೆ ಹಾಗೂ ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿತ್ತು. ಆದ್ರೀಗ ರಾಜ್ಯ ಸರಕಾರ ಶನಿವಾರದ ರಜೆಯ ಆದೇಶವನ್ನು ಹಿಂಪಡೆದಿದೆ.

Leave A Reply

Your email address will not be published.