ಸೋಮವಾರ, ಏಪ್ರಿಲ್ 28, 2025
HomeBreakingಸೂಪರ್ ಸ್ಟಾರ್ ರಾಜಕೀಯ ಎಂಟ್ರಿಗೆ ಮುಹೂರ್ತ ಪಿಕ್ಸ್…! ಹೊಸವರ್ಷದಿಂದ ಕಾರ್ಯಾರಂಭ….!

ಸೂಪರ್ ಸ್ಟಾರ್ ರಾಜಕೀಯ ಎಂಟ್ರಿಗೆ ಮುಹೂರ್ತ ಪಿಕ್ಸ್…! ಹೊಸವರ್ಷದಿಂದ ಕಾರ್ಯಾರಂಭ….!

- Advertisement -

ಚೈನೈ: ಸಾಕಷ್ಟು ಉಹಾಪೋಹ, ರಾಜಕೀಯ ಲೆಕ್ಕಾಚಾರಗಳ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಮುಹೂರ್ತ ನಿಗದಿಯಾಗಿದ್ದು, ಹೊಸ ಪಕ್ಷದೊಂದಿಗೆ ತಲೈವಾ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

 ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ದಿನಗಣಗೆ ಆರಂಭವಾಗಿರುವ ಬೆನ್ನಲ್ಲೇ ರಜನಿಕಾಂತ್ ರಾಜಕೀಯ ಪ್ರವೇಶಿಸುವ ಅಧಿಕೃತ ನಿರ್ಧಾರ ಪ್ರಕಟಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿರುವ ರಜನಿಕಾಂತ್, ಡಿಸೆಂಬರ್ 31 ರಂದು ಹೊಸ ಪಕ್ಷ ಘೋಷಿಸುವುದಾಗಿ ಹೇಳಿದ್ದಾರೆ.

ಜನವರಿ 1 ರಿಂದಲೇ ರಾಜಕೀಯ ಚಟುವಟಿಕೆಗಳು ಆರಂಭವಾಗಲಿದ್ದು,  ತಮಿಳುನಾಡಿನ ರಾಜಕೀಯದಲ್ಲಿ ಇನ್ಮುಂದೆ ಸೂಪರ್ ಸ್ಟಾರ್ ಯುಗವೊಂದು ಆರಂಭವಾಗಲಿದೆ ಅಂತ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ನಿನ್ನೆಯಷ್ಟೇ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ  ಅಭಿಮಾನಿಗಳು ಹಾಗೂ ಜಿಲ್ಲಾಮಟ್ಟದ ಕಾರ್ಯಕರ್ತರು, ಮುಖಂಡರ ಜೊತೆ ಸಭೆ ನಡೆಸಿದ್ದರು.

ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ತಲೈವಾ ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ ಪ್ರವೇಶದ ಅಧಿಕೃತ ಮಾಹಿತಿ ನೀಡಿದ್ದಾರೆ.  ಕೆಲದಿನಗಳ ಹಿಂದೆಯಷ್ಟೇ ರಜನಿಕಾಂತ್ ಅನಾರೋಗ್ಯದ ಕಾರಣಕ್ಕೆ ರಾಜಕೀಯದಿಂದ ದೂರ ಉಳಿಯುತ್ತಾರೆ ಎಂಬ ವದಂತಿಗಳು ಹರಡಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿದ್ದ ರಜನಿ, ಕಿಡ್ನಿ ಸೋಂಕಿಗೆ ತುತ್ತಾಗಿದ್ದು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದೇನೆ. ಮುಂದಿನ ದಿನದಲ್ಲಿ ರಾಜಕೀಯದ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದರು.

RELATED ARTICLES

Most Popular