ರಾಜ್ಯದಲ್ಲೂ ಅನ್ನದಾತನ ಹೋರಾಟಕ್ಕೆ ಬೆಂಬಲ…! ಡಿ.9 ರಂದು ಬಾರುಕೋಲು ಚಳುವಳಿ…!!

ಬೆಂಗಳೂರು: ರಾಷ್ಟ್ರ ರಾಜಧಾನಿಯಲ್ಲಿ ರೈತರು ಕರೆ ನೀಡಿರುವ ಬಂದ್ ಗೆ ರಾಜ್ಯದ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಡಿಸೆಂಬರ್ 9 ರಂದು ಬಾರುಕೋಲು ಚಳುವಳಿ ನಡೆಸಲು ನಿರ್ಧರಿಸಿದೆ.

ರಾಜ್ಯ ರೈತ ಸಂಘಟನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ವಿಚಾರವನ್ನು ಖಚಿತಪಡಿಸಿದ್ದು, ಬೆಂಗಳೂರು ಹೊರತುಪಡಿಸಿ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ ವಿವರಣೆ ನೀಡಿದ್ದಾರೆ.

ಕಳೆದ  11 ದಿನದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯದ ರೈತ ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿಸಿವೆ. ಹೀಗಾಗಿ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಮತ್ತು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಚಿಂತನೆ ನಡೆದಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.

ಸರಕಾರ ರೈತರ ವಿರುದ್ಧ ಕೈಗೊಂಡಿರುವ ಎಲ್ಲ ನಿರ್ಧಾರಗಳನ್ನು ಕೈಬಿಡುವ ತನಕ ಹೋರಾಟ ನಡೆಯಲಿದೆ . ಈ ಭಾರಿ ನೆಪಮಾತ್ರದ ಹೋರಾಟ ಅಲ್ಲ ಸರ್ಕಾರದ ನಿರ್ಧಾರ ಹಿಂಪಡೆಯುವ ತನಕವೂ ಹೋರಾಟ ನಡೆಯಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಡಿಸೆಂಬರ್ 9 ರಂದು ರಾಜ್ಯದಲ್ಲಿ ಬಾರುಕೋಲು ಚಳುವಳಿ ನಡೆಯಲಿದೆ. ದಪ್ಪ ಚರ್ಮದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಾರುಕೋಲು ಚಳುವಳಿ ನಡೆಸಲು ಚಿಂತನೆ ನಡೆಸಿದ್ದು, 10 ಸಾವಿರ ರೈತರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಕೋಡಿಹಳ್ಳಿ ಹೇಳಿದ್ದಾರೆ.

Comments are closed.