ಟೀಮ್ ಇಂಡಿಯಾದ ಖ್ಯಾತ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅರೆಸ್ಟ್

ಮುಂಬೈ : ಟೀಮ್ ಇಂಡಿಯಾದ ಖ್ಯಾತ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ಮಾರ್ಗಸೂಚಿಯನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಮುಂಬೈ ವಿಮಾನ ನಿಲ್ದಾಣ ಸಮೀಪದಲ್ಲಿರುವ ಡ್ರಾಗನ್ ಫ್ಲೈ ಕ್ಲಬ್​ನಲ್ಲಿ ಪಾರ್ಟಿ ಆಯೋಜಿಸಲಾಗಿದ್ದು, ಪೊಲೀಸರು ಪಾರ್ಟಿ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆಯಲ್ಲಿ ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ, ಟ ಹೃತಿಕ್ ರೋಷನ್ ಪತ್ನಿ ಸುಸೇನ್ ಖಾನ್ , ಗಾಯಕ ಗುರು ರಾಂಧವ ಸೇರಿದಂತೆ 34 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಬಂಧಿತ 34 ಜನರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188, 269, 34ರ ಅಡಿ, ಬಾಂಬೆ ಪೊಲೀಸ್ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ಕಾಯ್ದೆಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸಹಾರ್ ಪೊಲೀಸ್ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲವು ತಿಂಗಳ ಹಿಂದೆಯಷ್ಟೇ ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಘೋಷಿಸಿದ್ದ ಸುರೇಶ್ ರೈನಾ ಈ ಬಾರಿ ಐಪಿಎಲ್ ಪಂದ್ಯಾವಳಿಯಲ್ಲಿಯೂ ಪಾಲ್ಗೊಂಡಿರಲಿಲ್ಲ. ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಆಲಿ ಟ್ರೋಪಿ ಪಂದ್ಯಾವಳಿಗಾಗಿ ರೈನಾ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ.

Comments are closed.