ಶಿಕ್ಷಕಿಗೂ ಒಕ್ಕರಿಸಿತು ಮಹಾಮಾರಿ ಕೊರೊನಾ ಸೊಂಕು

0

ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಶಿಕ್ಷಕಿಯೋರ್ವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ದಾವಣಗೆರೆಯಿಂದ ಬೆಂಗಳೂರಿಗೆ ಬಂದಿದ್ದ 48 ವರ್ಷದ ಶಿಕ್ಷಕಿಗೆ ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಶಿಕ್ಷಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಯಲ್ಲಿ ಶಿಕ್ಷಕಿಯ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಇದೀಗ ಶಿಕ್ಷಕಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಶಿಕ್ಷಕಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ.

Leave A Reply

Your email address will not be published.