B.Ed ಕೋರ್ಸ್ ಗೆ ಸೇರುವವರಿಗೆ ಮಹತ್ವದ ಸೂಚನೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಪ್ರಸ್ತುತ ಸಾಲಿನ ಬಿ.ಇಡಿ ಕೋರ್ಸ್ ಗೆ ಸೇರ್ಪಡೆಯಾಗಲಿರುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸೂಚನೆಯನ್ನು ನೀಡಿದೆ. 2020-21ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸಿಗೆ ಅರ್ಜಿಯ ಸಲ್ಲಿಸಲು ನಿಗಧಿ ಪಡಿಸಿದ್ದಂತ ಅಂತಿಮ ದಿನಾಂಕವನ್ನು ಜನವರಿ 31ರವರೆಗೆ ವಿಸ್ತರಣೆ ಮಾಡಲಾಗಿದೆ.

2020-21ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯ ಸರ್ಕಾರಿ, ಮಾನ್ಯ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ ಮೂಲಕ ದಿನಾಂಕ 13-01-2021ರಿಂದ 26-01-2021ರವರೆಗೆ ಆಹ್ವಾನಿಸಲಾಗಿತ್ತು.
ಆದರೆ ಇದೀಗ ವಿದ್ಯಾರ್ಥಿಗಳ ಮನವಿಯ ಮೇರೆಗೆ ಅಭ್ಯರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು 31-01-2021ರವರೆಗೆ ವಿಸ್ತರಿಸಲಾಗಿದೆ.

ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಓದಿಕೊಂಡು, ಕ್ರಮಬದ್ಧವಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಲು ತಿಳಿಸಿದೆ.

Comments are closed.