ಸೋಮವಾರ, ಏಪ್ರಿಲ್ 28, 2025
HomeBreakingಯುವ ಕಾಂಗ್ರೆಸ್ ಪದಾಧಿಕಾರಿಯಾಗಿ ಮಂಗಳಮುಖಿ…!!ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಸಂಜನಾ ಚಲವಾದಿ …!!

ಯುವ ಕಾಂಗ್ರೆಸ್ ಪದಾಧಿಕಾರಿಯಾಗಿ ಮಂಗಳಮುಖಿ…!!ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಸಂಜನಾ ಚಲವಾದಿ …!!

- Advertisement -

ಮಂಗಳೂರು: ಎಲ್ಲರನ್ನು ಸಮಾನವಾಗಿ ನೋಡಬೇಕೆಂಬ ಕಾಂಗ್ರೆಸ್ ನ ಅಜೆಂಡಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರವಾಗಿ ಜಾರಿಗೆ ಬಂದಂತಿದ್ದು, ಇದೇ ಮೊದಲ ಬಾರಿಗೆ ಯುವಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳಮುಖಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಮಂಗಳೂರು ದಕ್ಷಿಣ ಯುವಕಾಂಗ್ರೆಸ್ ಪ್ರಧಾನಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್ ಮತ್ತು ದೀಕ್ಷಿತ್ ಆಯ್ಕೆಯಾಗಿದ್ದಾರೆ. ಆ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿ ಎಂಬ ಗೌರವಕ್ಕೂ ಸಂಜನಾ ಪಾತ್ರರಾಗಿದ್ದಾರೆ.

ಜನವರಿ 10,11 ಹಾಗೂ 12 ರಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ಆನ್ ಲೈನ್ ನಲ್ಲಿ ನಡೆದಿತ್ತು. ಈಗ ಫಲಿತಾಂಶ ಪ್ರಕಟವಾಗಿದ್ದು, ಸಂಜನಾ ಈ ಹುದ್ದೆಗೆ ಆಯ್ಕೆಯಾಗಿದ್ದಾರೆ.

2018 ರಲ್ಲಿ ಪರಿವರ್ತನ ನಡೆಸಿದಟ್ಯಾನ್ಸ್ ಕ್ವೀನ್ಸ್ ಬ್ಯೂಟಿಕಾಂಟೆಸ್ಟ್ ನ ವಿಜೇತರಾಗಿರುವ ಸಂಜನಾ ಚಲವಾದಿ, ಬ್ಯೂಟಿಷಿಯನ್ ಕೋರ್ಸ್ ಮುಗಿಸಿದ್ದು ವೃತ್ತಿಯಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದಕ್ಕೆ ಸಂತೋಷವಾಗಿದೆ ಎಂದು ಸಂಜನಾ, ತನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ. ಕಾಂಗ್ರೆಸ್ ಪದಾಧಿಕಾರಿ ಹುದ್ದೆಗೆ ಮಂಗಳಮುಖಿ ಆಯ್ಕೆಯಾದ ಸಂಗತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಜನರು ಮಿಶ್ರ ಪ್ರತಿಕ್ರಿಯೆ ನೀಡ್ತಿದ್ದಾರೆ.

RELATED ARTICLES

Most Popular