ತುಮಕೂರು : ಕೊರೊನಾ ಮಹಾಮಾರಿ ತುಮಕೂರು ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಮಾರ್ಚ್ 27 ರಂದು ಕೊರೊನಾದಿಂದ ಮೃತಪಟ್ಟಿದ್ದ ವೃದ್ದನ ಮಗನಿಗೂ ಇದೀಗ ಕೊರೊನಾ ಇರೋದು ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 84ಕ್ಕೆ ಏರಿಕೆಯಾಗಿದೆ.

ಧರ್ಮ ಪ್ರಚಾರಕ್ಕಾಗಿ ಶಿರಾದ ವೃದ್ದ ದೆಹಲಿಗೆ ತೆರಳಿದ್ದ. ಆದರೆ ಆತ ಶಿರಾಕ್ಕೆ ಮರಳಿದ ಬಳಿಕ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮಾರ್ಚ್ 27ರಂದು ಮೃತಪಟ್ಟಿದ್ದಾರೆ. ಹೀಗಾಗಿ ವೃದ್ದನ 3 ಮಂದಿ ಪತ್ನಿಯರು ಹಾಗೂ 16 ಮಂದಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ನಿಗಾ ಇರಿಸಲಾಗಿದೆ. ವೃದ್ದನ ಕುಟುಂಬಸ್ಥರ ಗಂಟಿನ ದ್ರವವನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ವೃದ್ದನ 13 ವರ್ಷದ ಮಗನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಇನ್ನೂ 30 ಮಂದಿಯ ಆರೋಗ್ಯ ತಪಾಸಣಾ ವರದಿ ಇನ್ನಷ್ಟೇ ಬರಬೇಕಾಗಿದೆ. ಶಿರಾದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನುಕೈಗೊಂಡಿದೆ.