ಬೆಂಗಳೂರು : ರಾಜ್ಯದಲ್ಲೀಗ ಕೊರೊನಾ ಎರಡನೇ ಅಲೆಯ ಆತಂಕ ಶುರುವಾಗಿದೆ. ರಾಜ್ಯ ಸರಕಾರ ಕೂಡ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಿದ್ದು, ಎರಡು ದಿನಗಳ ಕಾಲ ಮದ್ಯದಂಗಡಿಗಳನ್ನು ಮುಚ್ಚಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ.

ರಾಜ್ಯದಲ್ಲಿ ಮುಂದಿನ 48 ದಿನಗಳಲ್ಲಿ ಕೊರೊನಾ 2ನೇ ಅಲೆಯ ಆತಂಕ ಶುರುವಾಗಿದೆ. ಕೊರೊನಾ ತಾಂತ್ರಿಕ ಸಲಹಾ ಸಮಿತಿ ಕೂಡ ರಾಜ್ಯ ಸರಕಾರಕ್ಕೆ ಹಲವು ಶಿಫಾರಸ್ಸುಗಳನ್ನು ಮಾಡಿದೆ. ಸಭೆ ಸಮಾರಂಭಗಳಿಗೂ ಈಗಾಗಲೇ ಬ್ರೇಕ್ ಬೀಳಲಿದೆ. ಅದ್ರಲ್ಲೂ ಹೊಸ ವರ್ಷಾಚರಣೆಯ ಹೊತ್ತಲೇ ಮದ್ಯದಂಗಡಿಗಳಲ್ಲಿ ಜನರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಕೊರೊನಾ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಮದ್ಯದಂಗಡಿಗಳನ್ನು ಮುಚ್ಚಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮದ್ಯದಂಗಡಿಗಳಿಗೆ ಬಾಗಿಲು ಹಾಕಿದ್ದರಿಂದಾಗಿ ರಾಜ್ಯ ಸರಕಾರದ ಬೊಕ್ಕಸಕ್ಕೆ ಸುಮಾರು 4 ಸಾವಿರ ಕೋಟಿ ರೂಪಾಯಿ ನಷ್ಟವಾಗಿತ್ತು. ಇದೀಗ ಮತ್ತೆ ಮದ್ಯದಂಗಡಿಗಳನ್ನು ಬಂದ್ ಮಾಡಿದ್ದರೆ ರಾಜ್ಯದಲ್ಲಿ ಒಂದು ಸಾವಿರ ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಲಿದೆ.