ಉಡುಪಿ : ಕೃಷ್ಣ ನಗರರಿ ಉಡುಪಿಯಲ್ಲಿ ಒಂದೇ ದಿನ ಬರೋಬ್ಬರಿ 27 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 199 ಮಂದಿಯ ವರದಿ ಜಿಲ್ಲಾಡಳಿತ ಕೈ ಸೇರಿದ್ದು, ಈ ಪೈಕಿ 27 ಮಂದಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಕೊರೊನಾ ಪೀಡಿತರೆಲ್ಲರೂ ಹೊರ ರಾಜ್ಯಗಳಿಂದ ಬಂದವರೇ ಆಗಿದ್ದಾರೆ. ಮಹಾರಾಷ್ಟ್ರದಿಂದ ಬಂದಿದ್ದ ಬರೋಬ್ಬರಿ 23 ಮಂದಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದ್ದರೆ, ತೆಲಂಗಾಣದಿಂದ ಬಂದಿದ್ದ 3 ಮಂದಿ ಹಾಗೂ ಕೇರಳದಿಂದ ಕೆಎಂಸಿ ಗೆ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 16 ಮಂದಿ ಮಕ್ಕಳಿಗೆ ಕೊರೊನಾ ಸೋಂಕು ಕಂಡುಬಂದಿರುವುದು ಆತಂಕವನ್ನು ಮೂಡಿಸಿದೆ. ಉಳಿದಂತೆ 6 ಮಂದಿ ಗಂಡಸರು ಹಾಗೂ 5 ಮಂದಿ ಹೆಂಗಸರು ಮಹಾಮಾರಿಗೆ ತುತ್ತಾಗಿದ್ದಾರೆ, ಕೊರೊನಾ ಪೀಡಿತರೆಲ್ಲರೂ ಕ್ವಾರಂಟೈನ್ ಕೇಂದ್ರದಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.