ಉಡುಪಿಯಲ್ಲಿ ಹೆಚ್ಚಿದ ಕೋವಿಡ್ ಪ್ರಕರಣ : ಸಭೆ, ಸಮಾರಂಭಕ್ಕೆ ಮಾರ್ಷಲ್ ನೇಮಕ

ಉಡುಪಿ : ಕೋವಿಡ್ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜನರು ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಉಡುಪಿ ಜಿಲ್ಲಾದಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಜ್ಞರ ಸಮಿತಿಯ ಸಭೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಿತು. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬರುವವರು ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಬೇಕು. ಅಲ್ಲದೇ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಲೇ ಬೇಕು ಎಂದಿದ್ದಾರೆ.

ಇನ್ನು ಜನಸಾಮಾನ್ಯರು ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವುದರ ಜೊತೆಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. ಅದ್ರಲ್ಲೂ ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ದ ಕ್ರಮಕೈಗೊಳ್ಳಬೇಕು. ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ನಿಯಮ ಪಾಲನೆಗಾಗಿ ಮಾರ್ಷಲ್ ಗಳನ್ನು ನೇಮಕ ಮಾಡುವಂತೆ ಸೂಚಿಸಿದ್ದಾರೆ.

Comments are closed.