ಉಡುಪಿ : ಕೊರೊನಾ ಮಹಾಮಾರಿಗೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವರನ್ನು ಕೊರಂಟೈನ್ ಮಾಡಲಾಗಿದೆ ಎಂದು ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಬೊಮ್ಮಾಯಿ ಹೇಳಿದ್ದಾರೆ.

ಸಚಿವರ ಹೇಳಿಕೆಯ ವಿಡಿಯೋವನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಉಡುಪಿ ಡಿಸಿ ಪೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದ ಎಂದಿದ್ದಾರೆ.

ಈ ಹಿಂದೆ ಉಡುಪಿಯ ವ್ಯಕ್ತಿಯೋರ್ವರಿಗೆ ಕೊರೊನಾ ಇರೋದು ದೃಢಪಟ್ಟಿತ್ತು. ಇದೀಗ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಜಿಲ್ಲಾಡಳಿತ ಕೊರೊನಾ ಸೋಂಕು ದೃಢಪಟ್ಟಿರುವುದನ್ನು ಖಚಿತಪಡಿಸಿಲ್ಲ.