ಉಡುಪಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕರಾವಳಿಗರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದ 9 ಮಂದಿ ಪೊಲೀಸರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ. ಕೊರೊನಾ ಹೋರಾಟದಲ್ಲಿ ಪೊಲೀಸರು ಯೋಧರಂತೆ ಕೆಲಸ ಮಾಡುತ್ತಿದ್ದಾರೆ. ಆದರೆ ಪೊಲೀಸರನ್ನು ಯಾರೂ ಕೂಡ ಅಸ್ಪೃಶ್ಯರಂತೆ ನೋಡಬೇಡಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು 9 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಲೇ ಎಲ್ಲಾ ಪೊಲೀಸರನ್ನೂ ಜನರು ಅನುಮಾನದಿಂದ ನೋಡುವ ಸ್ಥಿತಿ ನಿರ್ಮಾಣವಾಗಿತ್ತು. ಆದ್ರೀಗ ಕೊರೊನಾ ಪೀಡಿತರಾಗಿದ್ದ ಪೊಲೀಸರು ಗುಣಮುಖರಾಗಿದ್ದಾರೆ.

ಹೀಗಾಗಿ ಕೊರೊನಾ ವೈರಸ್ ಸೋಂಕಿನ ವಿರುದ್ದದ ಹೋರಾಟದಲ್ಲಿ ಶ್ರಮಿಸುತ್ತಿರುವ ಪೊಲೀಸರನ್ನು ಸಂಶಯದಿಂದ ನೋಡಬಾರದು ಎಂದು ಜಿಲ್ಲಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.