ಉಡುಪಿಯಲ್ಲಿ ಕೊರೊನಾ ಸ್ಪೋಟ : ಬರೋಬ್ಬರಿ 25 ಮಂದಿಗೆ ಕೊರೊನಾ ಸೋಂಕು

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಉಡುಪಿ ಜಿಲ್ಲೆಗೆ ಆತಂಕವನ್ನು ತಂದೊಡ್ಡಿದೆ. ಉಡುಪಿ ಜಿಲ್ಲೆಯಲ್ಲಿ ಗುರುವಾರ ಕೊರೊನಾ ಸ್ಪೋಟವಾಗಿದೆ. ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 25 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಂದೇ ದಿನ 116 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕೊರೊನಾ ಪೀಡಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ 25 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಮಂಡ್ಯದಲ್ಲಿ 15, ಹಾಸನ 13, ಬಳ್ಳಾರಿ 11, ಬೆಳಗಾವಿ 9, ಉತ್ತರ ಕನ್ನಡ 9, ಬೆಂಗಳೂರು 7, ಶಿವಮೊಗ್ಗ 6, ದಕ್ಷಿಣ ಕನ್ನಡ 6, ಧಾರವಾಡ 5, ದಾವಣಗೆರೆ 3, ಗದಗ 2, ಚಿಕ್ಕಬಳ್ಳಾಪುರ 2, ಮೈಸೂರು 1, ತುಮಕೂರು 1 ಹಾಗೂ ವಿಜಯಪುರ ಓರ್ವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಉಡುಪಿ ಹಾಗೂ ದಕ್ಷಿಣ ಕನ್ಡಡ ಜಿಲ್ಲೆಗೆ ಮುಂಬೈ ನಿವಾಸಿಗರು ಕಂಟಕವಾಗಿ ಪರಿಣಮಿಸಿದ್ದಾರೆ. ಗ್ರೀನ್ ಝೋನ್ ನಲ್ಲಿದ್ದ ಉಡುಪಿಯಲ್ಲೀಗ ಒಂದೇ ದಿನ 25 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಎಲ್ಲರೂ ಕೂಡ ಮುಂಬೈನಿಂದ ಬಂದವರೇ ಆಗಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಗೂ ಮುಂಬೈ ನಿವಾಸಿಗಳೇ ಕಂಟಕವಾಗಿದ್ದಾರೆ. ಇಂದೂ ಕೂಡ 6 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಬರೋಬ್ಬರಿ 9 ಮಂದಿಗೆ ಸೊಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಕರಾವಳಿಯ ಜಿಲ್ಲೆಗಳು ಕೊರೊನಾ ಸೊಂಕಿನಿಂದ ತತ್ತರಿಸಿ ಹೋಗಿವೆ.

ರಾಜ್ಯದಲ್ಲಿ ಇಂದು ಕಾಣಿಸಿಕೊಂಡಿರುವ 116 ಮಂದಿ ಕೊರೊನಾ ಸೋಂಕಿತರ ಪೈಕಿ 53 ಮಂದಿ ಮುಂಬೈನಿಂದ ಬಂದವರಾಗಿದ್ದಾರೆ. ಉಳಿದಂತೆ ತಮಿಳುನಾಡು, ತೆಲಂಗಾಣ, ರಾಜ್ಯದಿಂದ ಬಂದವರಿಗೇ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 1578 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 41 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ 570 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರೆ, 966 ಮಂದಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave A Reply

Your email address will not be published.