ಉಡುಪಿ, ದ.ಕದಲ್ಲಿ ಒಂದೇ ದಿನ 648 ಮಂದಿಗೆ ಕೊರೊನಾ !

0

ಮಂಗಳೂರು / ಉಡುಪಿ : ಕೊರೊನಾ ವೈರಸ್ ಸೋಂಕು ಕರಾವಳಿಯಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಒಂದೇ ದಿನ 648 ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಆತಂಕವನ್ನು ತಂದೊಡ್ಡಿದೆ.

ಉಡುಪಿ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆಯನ್ನು ಕಂಡಿದೆ. ಉಡುಪಿ ಜಿಲ್ಲೆಯಲ್ಲಿಂದು 402 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 246 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 7174 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, 4138 ಮಂದಿ ಇದುವರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಳಿದಂತೆ 2, 194 ಮಂದಿ ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿಂದು ಓರ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 246 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಸೋಂಕಿತರ ಸಂಖ್ಯೆ 8.066ಕ್ಕೆ ಏರಿಕೆಯನ್ನು ಕಂಡಿದೆ. ಜಿಲ್ಲೆಯಲ್ಲಿ 5.864 ಮಂದಿ ಇದುವರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರೆ, 1,952 ಮಂದಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಕೊರೊನಾ ಸಾವಿನ ಸರಣಿ ಮುಂದುವರಿದಿದ್ದು, 6 ಮಂದಿಯನ್ನು ಹೆಮ್ಮಾರಿ ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 248ಕ್ಕೆ ಏರಿಕೆಯನ್ನು ಕಂಡಿದೆ.

ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯ ಜೊತೆಗೆ ಸಾವನ್ನಪ್ಪುವವರ ಸಂಖ್ಯೆಯಲ್ಲಿಯೂ ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿರುವುದು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಲೆನೋವು ತರಿಸಿದೆ.

Leave A Reply

Your email address will not be published.