ಉಡುಪಿ : ದೆಹಲಿಯ ನಿಜಾಮುದ್ದೀನ್ ಮಾರ್ಕಸ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ ಯಾರೂ ಕೂಡ ಪಾಲ್ಗೊಂಡಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯ ನಿಮಾಮುದ್ದೀನ್ ಮಾರ್ಕಸ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯ 16 ಮಂದಿ ಪಾಲ್ಗೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಇದರಿಂದಾಗಿ ಉಡುಪಿ ಜಿಲ್ಲೆಯ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಆದ್ರೀಗ ಜಿಲ್ಲಾಧಿಕಾರಿಗಳು ಉಡುಪಿ ಜನರ ಆತಂಕವನ್ನು ದೂರ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ಲಾಕ್ ಡೌನ್ ಆದೇಶಕ್ಕೆ ಉಡುಪಿ ಜಿಲ್ಲೆಯ ಜನತೆ ಉತ್ತಮವಾಗಿ ಬೆಂಬಲ ನೀಡಿದ್ದಾರೆ. ಇನ್ನೂ 14 ದಿನಗಳ ಕಾಲ ಲಾಕ್ ಡೌನ್ ಆದೇಶವನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ 3 ಮಂದಿಗೆ ಮಾತ್ರವೇ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಇದೇ ರೀತಿಯಲ್ಲಿ ಲಾಕ್ ಡೌನ್ ಆದೇಶವನ್ನು ಪಾಲನೆ ಮಾಡಿದ್ರೆ ಉಡುಪಿ ಕೊರೊನಾ ಮುಕ್ತ ಜಿಲ್ಲೆಯಾಗಲಿದೆ ಎಂದಿದ್ದಾರೆ.