ಮನೆಯಿಂದ ಹೊರಬಂದ್ರೆ ಕಾನೂನು ಕ್ರಮ : ಉಡುಪಿ ಡಿಸಿ ಎಚ್ಚರಿಕೆ

0

ಉಡುಪಿ : ಕೊರೊನಾ ಮಹಾಮಾರಿ ವಿರುದ್ದ ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಅಂತೆಯೇ ಉಡುಪಿ ಜಿಲ್ಲೆಯಲ್ಲಿಯೂ ಮಾರ್ಚ್ 23ರ ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಈಗಾಗಲೇ ಸೆಕ್ಷನ್ 144 ಜಾರಿಯಲ್ಲಿದ್ದು, ಮಾರ್ಚ್ 23ರ ಮಧ್ಯರಾತ್ರಿಯಿಂದಲೇ ಕರ್ಪ್ಯೂ ಜಾರಿ ಮಾಡಲಾಗಿದೆ. ಹೀಗಾಗಿ ಯಾರೂ ಕೂಡ ಮನೆಯಿಂದ ಹೊರಗೆ ಬರುವಂತಿಲ್ಲ. ಅನಗತ್ಯವಾಗಿ ತಿರುಗಾಡುವವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ಆದರೆ ತುರ್ತು ಸಂದರ್ಭಗಳಲ್ಲಿ ಮಾತ್ರವೇ ಮನೆಯಿಂದ ಹೊರಗೆ ಬರಲು ಅವಕಾಶ ಕಲ್ಪಿಸಲಾಗಿದೆ.

ಆಹಾರ ಸೌಲಭ್ಯ, ಮೀನು, ಹಾಲು, ಔಷಧಿ, ಮಾಂಸ ಸೇರಿದಂತೆ ತುರ್ತು ಸೇವೆಗಳನ್ನು ಜನರು ಬಳಸಿಕೊಳ್ಳಬಹುದಾಗಿದೆ. ಜಿಲ್ಲೆಯಾದ್ಯಂತ ಲಾಕ್ ಡೌನ್ ನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಸರಕಾರಿ ಹಾಗೂ ಖಾಸಗಿ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ. ಸರಕಾರದ ಆದೇಶಕ್ಕೆ ಜಿಲ್ಲೆಯ ಜನತೆ ಸಹಕಾರ ನೀಡಬೇಕು. 10 ದಿನಗಳ ಕಾಲ ಜನರು ಮನೆಯಲ್ಲಿಯೇ ಉಳಿಯುವ ಮೂಲಕ ಕೊರೊನಾ ವೈರಸ್ ತಡೆಗೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Leave A Reply

Your email address will not be published.