ಉಡುಪಿಯಲ್ಲಿ ಮೂರು ಪೊಲೀಸ್ ಠಾಣೆಗಳು ಸಿಲ್ ಡೌನ್ : ಅಜೆಕಾರಿನಲ್ಲಿ ಎಎಸ್ ಐ, ಕಾರ್ಕಳದಲ್ಲಿ ಪೇದೆಗೆ ಸೋಂಕು !

0

ಕಾರ್ಕಳ : ಕೊರೊನಾ ಮುಕ್ತವಾಗಿದ್ದ ಉಡುಪಿ ಜಿಲ್ಲೆಯಲ್ಲೀಗ ಮಹಾಮಾರಿ ಆತಂಕವನ್ನು ತಂದೊಡ್ಡುತ್ತಿದೆ. ಇಷ್ಟು ದಿನ ಮುಂಬೈ, ದುಬೈನಿಂದ ಬಂದಿದ್ದವರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ರೆ, ಇದೀಗ ಓರ್ವ ಎಎಸ್ ಐ ಹಾಗೂ ಪೊಲೀಸ್ ಪೇದೆಯೋರ್ವರಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಇದೀಗ ಪೊಲೀಸರಿಗೂ ಕೊರೊನಾ ಆತಂಕ ತಂದೊಡ್ಡಿದ್ದು, ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿಗ ಕೊರೊನಾ ಬಿಗ್ ಶಾಕ್ ಕೊಟ್ಟಿದೆ. ಕ್ವಾರಂಟೈನ್ ನಲ್ಲಿದ್ದವರ ರಕ್ಷಣೆಗಿದ್ದ ಪೊಲೀಸರಿಗೆ ಇದೀಗ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಅಜೆಕಾರು ಠಾಣೆಯ ಎಎಸ್ ಐ ಹಾಗೂ ಕಾರ್ಕಳ ನಗರ ಠಾಣೆಯ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದ್ರೀಗ ಅಂತಿಮ ವರದಿಗಾಗಿ ಕಾಯಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ನಗರ ಠಾಣೆಗೆ ಹೊಂದಿಕೊಂಡು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯೂ ಇದೆ. ಹೀಗಾಗಿ ಕಾರ್ಕಳ ನಗರ, ಗ್ರಾಮಾಂತರ ಹಾಗೂ ಅಜೆಕಾರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಮೂರು ಠಾಣೆಗಳ ಪೊಲೀಸ್ ಸಿಬ್ಬಂಧಿಗಳನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಮೂರು ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದ್ದು, ನಂತರದಲ್ಲಿ ಮೂರು ಪೊಲೀಸ್ ಠಾಣೆಗಳು ಪರ್ಯಾಯ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸಲಿವೆ.

Leave A Reply

Your email address will not be published.