ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೆ ಲಾಕ್ ಡೌನ್ ? ಆತಂಕ ಮೂಡಿಸಿದ ಮೂಲಪತ್ತೆಯಾಗದ ಸೋಂಕಿತರು

0

ಉಡುಪಿ : ಕರಾವಳಿಗೆ ಕೊರೊನಾ ಆಘಾತವನ್ನು ತಂದೊಡ್ಡಿದೆ. ಒಂದು ಕಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಣ ಮೃದಂಗ ಬಾರಿಸುತ್ತಿದ್ರೆ, ಉಡುಪಿಯಲ್ಲೀ ಸೋಂಕಿತರ ಸಂಖ್ಯೆ ಏರಿಕೆಯನ್ನು ಕಾಣುತ್ತಿದೆ. ಅದ್ರಲ್ಲೂ ಮೂಲವೇ ಪತ್ತೆಯಾಗದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ. ಕೊರೊನಾ ನಿಯಂತ್ರಣಕ್ಕೆ ಉಡುಪಿ ಜಿಲ್ಲೆಯಲ್ಲಿಯೂ ಒಂದು ವಾರಗಳ ಲಾಕ್ ಡೌನ್ ಹೇರಿಕೆಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಉಡುಪಿ ಜಿಲ್ಲೆಯಲ್ಲಿ ಮೊನ್ನೆ 90 ಮಂದಿಗೆ ಸೋಂಕು ಕಾಣಿಸಿಕೊಂಡಿದ್ರೆ, ನಿನ್ನೆ 43 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,609ಕ್ಕೆ ಏರಿಕೆಯನ್ನು ಕಂಡಿದ್ದು, ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಅದ್ರಲ್ಲೂ ಮೂಲ ಪತ್ತೆಯಾಗದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಆತಂಕವನ್ನು ಮೂಡಿಸಿದೆ. ಇನ್ನೊಂದೆಡೆ ಬೆಂಗಳೂರ, ಮುಂಬೈ ಹಾಗೂ ವಿದೇಶಗಳಿಂದ ಬರುವವರ ಸಂಖ್ಯೆ ಹೆಚ್ಚುತ್ತಿದೆ.

ಕುಂದಾಪುರ ತಾಲೂಕಿನಲ್ಲಿ ಈಗಾಗಲೇ ವರ್ತಕರು ಇಂದಿನಿಂದ ಜುಲೈ 31ರ ವರೆಗೂ ಸ್ವಯಂ ಪ್ರೇರಿತ ಲಾಕ್ ಡೌನ್ ಆಚರಿಸಲು ಮುಂದಾಗಿದ್ದು, ಮಧ್ಯಾಹ್ನ 2 ಗಂಟೆಯ ವರಗೆ ಮಾತ್ರವೇ ವ್ಯಾಪಾರ ವಹಿವಾಟು ನಡೆಯಲಿದೆ. ಇನ್ನೊಂದೆಡೆ ಜಿಲ್ಲೆಯ ಜನಪ್ರತಿನಿಧಿಗಳು ಕೂಡ ಲಾಕ್ ಡೌನ್ ಮಾಡುವ ಕುರಿತು ಜಿಲ್ಲಾಡಳಿತಕ್ಕೆ ಮನವಿಯನ್ನು ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಿಎಂ ಸಭೆಯಲ್ಲಿ ಜಿಲ್ಲೆಯ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ಅಲ್ಲದೇ ಜಿಲ್ಲಾಡಳಿತ ಕೂಡ ಲಾಕ್ ಡೌನ್ ಆದೇಶಕ್ಕೆ ಮನಸ್ಸು ಮಾಡಿದೆ ಎನ್ನಲಾಗುತ್ತಿದೆ.

ಒಂದೊಮ್ಮೆ ಮುಖ್ಯಮಂತ್ರಿಗಳ ಜೊತೆಗೆ ನಡೆಯಲಿರುವ ಸಭೆಯ ನಂತರ ಲಾಕ್ ಡೌನ್ ನಿರ್ಧಾರ ಹೊರ ಬೀಳುವ ಸಾಧ್ಯತೆಯಿದೆ. ಲಾಕ್ ಡೌನ್ ಆದೇಶ ಜಾರಿಯಾದ್ರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಜಾರಿಗೆ ತರುವ ಚಿಂತನೆಯಲ್ಲಿದೆ. ಇನ್ನೊಂದು ಅಂತರ್ ಜಿಲ್ಲಾ ಓಡಾಟಕ್ಕೂ ಕೂಡ ಕಡಿವಾಣ ಹಾಕುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಬಹುತೇಕ ಖಚಿತ.

Leave A Reply

Your email address will not be published.