3 Days Red Alert : ಕರಾವಳಿಯಲ್ಲಿ ಭಾರೀ ಮಳೆ, 3 ದಿನ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು/ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಗೋಚರಿಸುತ್ತಿಲ್ಲ. ಮುಂದಿನ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲೀಗ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ (3 days red Alert) ಘೋಷಣೆ ಮಾಡಲಾಗಿದೆ.

ಇನ್ನು ಮಲೆನಾಡಿನ ಭಾಗದಲ್ಲಿಯೂ ಮಳೆ ಸದ್ಯಕ್ಕೆ ಬಿಡುವು ನೀಡುವ ಲಕ್ಷಣಗಳು ಗೋಚರಿಸುತ್ತಿಲ್ಲ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ನಷ್ಟ ಉಂಟು ಮಾಡಿದೆ. ಹಲವು ಕಡೆಗಳಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೃತ ನೆರೆ ಹಾವಳಿ ಉಂಟಾಗಿದೆ. ಇನ್ನು ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿರುವ ಘಟನೆಗಳು ಸಂಭವಿಸಿದೆ.

ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನೂರಾರು ಎಕರೆ ಕೃಷಿಭೂಮಿ ಜಲಾವೃತವಾಗಿದೆ. ಭತ್ತದ ಕೃಷಿ ನೀರಿನಲ್ಲಿ ಕೊಳೆಯಲು ಆರಂಭಿಸಿದೆ. ಮಳೆಯ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳುಗಳಿಗೆ ಕಳೆದ ಮೂರ್ನಾಲ್ಕು ದಿನಗಳಿಂದಲೂ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆಯನ್ನು ಘೋಷಣೆ ಮಾಡಲಾಗಿದೆ. ಆದ್ರೀಗ ಮತ್ತೆ ರೆಡ್‌ ಅಲರ್ಟ್‌ ಘೋಷಣೆ ಮಾಡಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಮಳೆ ಇದೇ ರೀತಿಯಲ್ಲಿ ಮುಂದುವರಿಯುವುದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸುವ ಸಾಧ್ಯತೆಯಿದೆ.

ಇದನ್ನೂ ಓದಿ : IT Returns Filing: ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಲು ಇದೇ ಜುಲೈ 31 ಕೊನೆಯ ದಿನ!!

ಇದನ್ನೂ ಓದಿ : Amarnath : ಮೇಘಸ್ಫೋಟದ ಕರಾಳ ಅನುಭವವನ್ನು ಬಿಚ್ಚಿಟ್ಟ ಅಮರನಾಥ ಯಾತ್ರಾರ್ಥಿಗಳು

Udupi Mangalore heavy rain 3 days red Alert Declare in Costal Karnataka

Comments are closed.