ಉಡುಪಿ ನಗರಸಭೆ ಸೀಲ್ ಡೌನ್ : ಆರೋಗ್ಯ ಸಿಬ್ಬಂದಿಗೆ ಕೊರೊನಾ

0

ಉಡುಪಿ : ಕೃಷ್ಣನಗರಿ ಉಡುಪಿಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ನಗರಸಭೆಯ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಆರೋಗ್ಯ ಇಲಾಖೆಯ ಸಿಬ್ಬಂದಿ ಹಲವು ದಿನಗಳಿಂದಲೂ ಕ್ವಾರಂಟೈನ್ ನಲ್ಲಿದ್ದರು. ಈ ವೇಳೆಯಲ್ಲಿ ಗಂಟಲು ದ್ರವದ ಪರೀಕ್ಷೆಯನ್ನು ನಡೆಸಿದಾಗ ಕೊರೊನಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ನಗರಸಭೆಯನ್ನು ಸೀಲ್ ಡೌನ್ ಮಾಡಲಾಗಿದೆ. ನಗರಸಭೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಮತ್ತೆ ಸಾರ್ವಜನಿಕರ ಸೇವೆಗೆ ಸಜ್ಜುಗೊಳಿಸಲಾಗುತ್ತದೆ.

Leave A Reply

Your email address will not be published.