ಕೊರೊನಾ ವಿಚಾರದಲ್ಲಿ ಉಡುಪಿ ಜನತೆಗೆ ಸಿಹಿಸುದ್ದಿಕೊಟ್ಟ ಜಿಲ್ಲಾಧಿಕಾರಿಗಳು

1

ಉಡುಪಿ : ಕೊರೊನಾ ವಿಚಾರವಾಗಿ ಉಡುಪಿ ಜಿಲ್ಲೆಯ ಜನರಿಗೆ ಜಿಲ್ಲಾಧಿಕಾರಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಹೊರಗಡೆಯಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಕಡಿಮೆಯಿದೆ. ಜಿಲ್ಲೆಯಲ್ಲಿ ಮೂರು ಪಾಸಿಟಿವ್ ಪ್ರಕರಣ ಬಿಟ್ರೆ ಉಳಿದ ಯಾರಿಗೂ ಕೊರೊನಾ ಸೋಂಕಿಲ್ಲಾ ಎಂದು ಜಿಲ್ಲಾಧಿಕಾರಿ ಜಗದೀಶ್ ಅವರು ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಒಟ್ಟು 3 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿರುವವರನ್ನು ಈಗಾಗಲೇ ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನೂ ಕೊರೊನಾ ತಪಾಸಣೆಗೆ ಒಳಪಡಿಸಲಾಗಿದ್ದು, ಅವರೆಲ್ಲರಿಗೂ ನೆಗೆಟಿವ್ ಅಂತಾ ವರದಿ ಬಂದಿದೆ. ಹೀಗಾಗಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ.

ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯ ಜಿಲ್ಲೆಯಲ್ಲಿ ಕಡಿಮೆಯಾಗಿದ್ರೂ ಕೂಡ ಎಪ್ರಿಲ್ 14ರ ವರೆಗೆ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಆಚರಿಸಲಾಗುತ್ತದೆ. ಆದರೆ ಬೆಳಗ್ಗೆ 7 ರಿಂದ 11 ಗಂಟೆಯ ವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿದ್ದರೆ, ಜನರು ಅನಗತ್ಯವಾಗಿ ತಿರುಗಾಡುವುದು ನನ್ನ ಗಮನಕ್ಕೆ ಬಂದಿದೆ. ಅನಗತ್ಯವಾಗಿ ತಿರುಗಾಡುವವರ ವಾಹನಗಳನ್ನು ಈಗಾಗಲೇ ಸೀಜ್ ಮಾಡಲಾಗಿದೆ.

ಈ ಕುರಿತು ಎಸ್ಪಿ ಅವರಿಗೂ ಮಾತನಾಡಿದ್ದೇನೆ. ಯಾರಾದ್ರೂ ಅನಾವಶ್ಯಕವಾಗಿ ಮನೆಯಿಂದ ಹೊರ ಬಂದ್ರೆ ಅಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಕೊರೊನಾ ವಿರುದ್ದದ ಹೋರಾಟಕ್ಕೆ ಜನತೆ ಬೆಂಬಲ ನೀಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

1 Comment
  1. Manjunath Bangera says

    Nice Information…

Leave A Reply

Your email address will not be published.