ಬೆಂಗಳೂರು : ಹೊಸ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದಲೇ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ತಾಂತ್ರಿಕ ಸಮಿತಿಯ ಸಭೆಯನ್ನು ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತಿದೆ. ಜನವರಿ 2 ಗಂಟೆಯವರೆಗೆ ಈ ಆದೇಶ ಜಾರಿಗೊಳಿಸಲಾಗುತ್ತಿದೆ. ಈ ಕುರಿತು ಮಾರ್ಗಸೂಚಿಯನ್ನು ಹೊರಡಿಸುವುದಾಗಿ ಅವರು ತಿಳಿಸಿದ್ದಾರೆ.
ವಿದೇಶಗಳಿಂದ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದ್ದು, ಪ್ರತಿಯೊಬ್ಬರನ್ನೂ ಕೂಡ ಆರ್ ಟಿಪಿಸಿಆರ್ ಟೆಸ್ಟ್ ಗೆ ಒಳಪಡಿಸಲಾಗುತ್ತಿದ್ದು, ವಿದೇಶಗಳಿಂದ ಬರುವವರು 72 ಗಂಟೆಗಳ ಮೊದಲು ಕಡ್ಡಾಯವಾಗಿ ಟೆಸ್ಟ್ ಮಾಡಿಸಿದ ವರದಿಯನ್ನು ಹೊಂದಿರಲೇ ಬೇಕು ಎಂದು ತಿಳಿಸಿದ್ದಾರೆ.