ನವದೆಹಲಿ : ಕೊರೊನಾ ವೈರಸ್ ಸೋಂಕು ದಿನೇ ಹೆಚ್ಚುತ್ತಲೇ ಇದೆ. ಇಷ್ಟು ದಿನ ಜನಸಾಮಾನ್ಯರನ್ನು ಕಾಡುತ್ತಿದ್ದ, ಕೊರೊನಾ ಇದೀಗ ಉತ್ತರಾಖಂಡ್ ರಾಜ್ಯದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಎಲ್ಲಾ ಸಂಪುಟ ಸಚಿವರನ್ನೂ ಕ್ವಾರಂಟೈನ್ ಗೆ ಒಳಪಡಿಸಿದೆ.

ಉತ್ತರಾಖಂಡ್ ರಾಜ್ಯದ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಸಚಿವರ ಪತ್ನಿ, ಇಬ್ಬರು ಪುತ್ರರು, ಸೋಸೆ ಹಾಗೂ ಕುಟುಂಬಸ್ಥರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಮಾತ್ರವಲ್ಲ ಪ್ರವಾಸೋಧ್ಯಮ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂಧಿಗಳು ಸೇರಿದಂತೆ ಒಟ್ಟು22 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು.

ಸಚಿವ ಸತ್ಪಾಲ್ ಮಹಾರಾಜ್ ಅವರು ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಈ ಕುರಿತು ಸರಕಾರದ ಮುಖ್ಯ ಕಾರ್ಯದರ್ಶಿ ಉತ್ಪಾಲ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.