ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಕತ್ತೋಡಿಬೈಲುವಿ ನಲ್ಲಿ ನಡೆದಿದೆ.
ಬೆಳ್ತಂಗಡಿಯ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಸೌಮ್ಯ ( 19 ವರ್ಷ) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಉಪಹಾರ ಸೇವಿಸಿ ರೂಮಿಗೆ ತೆರಳಿದ್ದ ಸೌಮ್ಯ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಲಾಕ್ ಡೌನ್ ನಂತರ ಕಾಲೇಜು ಆರಂಭಗೊಂಡಿದ್ದರೂ ಕೂಡ ಈಕೆ ತರಗತಿಗೆ ಹಾಜರಾಗದೆ ಮನೆಯಲ್ಲಿಯೇ ಉಳಿದುಕೊಂಡಿದ್ದಳು. ಮಾನಸಿಕವಾಗಿ ಕುಗ್ಗಿ ಹೋಗಿದ್ದಳು ಎನ್ನಲಾಗುತ್ತಿದೆ.
ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಕಾರ್ಯವನ್ನು ನಡೆಸಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ವೇಣೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.