ಬೆಂಗಳೂರು : ಖ್ಯಾತ ನಿರ್ಮಾಪಕ, ಉದ್ಯಮಿ ವಿ.ಕೆ.ಮೋಹನ್ (ಕಪಾಲಿ ಮೋಹನ್) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿನಿಮಾ ನಿರ್ಮಾಪಕರಾಗಿ, ವಿತರಕರಾಗಿ, ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯ ಮೋಹನ್ ಅವರು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಬಳಿಯಲ್ಲಿರುವ ಹೋಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.

ಡಾ.ರಾಜಕುಮಾರ್ ಅವರ ಕುಟುಂಬದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದ ಕಪಾಲಿ ಮೋಹನ್ ಅವರು ಸಿನಿಮಾ ವಿತರಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಳೆದ ಬಾರಿ ವಿಕೆ ಮೋಹನ್ ಅವರಿಗೆ ಸೇರಿದ ಕ್ಲಬ್ ಮೇಲೆ ದಾಳಿ ನಡೆದು, ಬಂಧನಕ್ಕೆ ಒಳಗಾಗಿದ್ದರು. ಇದರಿಂದಾಗಿಯೇ ಮೋಹನ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು.

ಈ ಹಿಂದೆ ಕೂಡ ವಿ.ಕೆ.ಮೋಹನ್ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ನೋವಿನಲ್ಲೇ ಆರ್ಥಿಕವಾಗಿಯೂ ಕುಗ್ಗಿ ಹೋಗಿದ್ದರು. ನಿನ್ನೆ ಹೋಟೆಲ್ ಗೆ ಬಂದಿದ್ದ ಮೋಹನ್ ಅವರು ಇಂದು ರೂಮ್ ಬಾಗಿಲು ತೆಗೆಯದೇ ಇದ್ದಾಗ ಅನುಮಾನಗೊಂಡ ಹೋಟೆಲ್ ಸಿಬ್ಬಂಧಿ ಕಿಟಕಿಯಲ್ಲಿ ನೋಡಿದಾಗ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.