ಪಡಿತರ ಕಾರ್ಡ್ ದಾರರೇ ಎಚ್ಚರ. ..! ಅಕ್ಕಿ ಮಾರಾಟ ಮಾಡಿದ್ರೆ ಕಾರ್ಡ್ ಅಮಾನತ್ತು

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಒಂದೊಮ್ಮೆ ಮಾರುಕಟ್ಟೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡಿದ್ರೆ ನಿಮ್ಮ ರೇಷನ್ ಕಾರ್ಡ್ಗಳು ರದ್ದಾಗಲಿದೆ.

ರಾಜ್ಯದಲ್ಲಿ ಪಡಿತರ ಸಾಮಗ್ರಿಗಳ ಮಾರಾಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಈ ಆದೇಶ ಜಾರಿಗೆ ತಂದಿದ್ದು, ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್ಗಳು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.

ರಾಜ್ಯದಲ್ಲಿ 1,17,01,012 ಬಿಪಿಎಲ್, 10,92,580 ಅಂತ್ಯೋದಯ ಹಾಗೂ 21,05,000 ಎಪಿಎಲ್ ಕಾರ್ಡ್ ಸೇರಿ ಒಟ್ಟು 1,48,98,592 ಕಾರ್ಡ್ಗಳಿವೆ. ಪ್ರತಿ ತಿಂಗಳು 19,972 ನ್ಯಾಯಬೆಲೆ ಅಂಗಡಿಗಳಿಂದ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕಾರ್ಡ್ಗೆ 2 ಕೆಜಿ ಗೋಧಿ ನೀಡಲಾಗುತ್ತಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ.

Comments are closed.