ನವದೆಹಲಿ : ನೀವು ರಾಜ್ಯದ ಮುಖ್ಯಮಂತ್ರಿ. ನಿಮ್ಮ ವಿರುದ್ದ ಯಾರು ವಾರಂಟ್ ಹೊರಡಿಸಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

2011ರಲ್ಲಿ ನಡೆದಿದ್ದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಆದರೆ, ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.

ಸಿಎಂ ಯಡಿಯೂರಪ್ಪ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಹೈಕೋರ್ಟ್ ಆದೇಶದ ಅನುಸಾರವಾಗಿ ಕ್ರಮ ಕೈಗೊಂಡರೆ, ಮುಖ್ಯಮಂತ್ರಿಯ ವಿರುದ್ದ ವಾರಂಟ್ ಹೊರಡಿಸಬೇಕಾಗುತ್ತದೆ. ಅದಕ್ಕಾಗಿ ಬಂಧನದಿಂದ ರಕ್ಷಣೆ ಕೇಳುತ್ತಿರುವುದಾಗಿ ತಿಳಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರು, ನೀವು ರಾಜ್ಯದ ಮುಖ್ಯಮಂತ್ರಿ ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸಬಹುದು. ಇದಲ್ಲದೆ, ಮುಖ್ಯಮಂತ್ರಿ ವಿರುದ್ಧ ಮನವಿ ಪತ್ರವನ್ನು ನೀಡುತ್ತಾರೆ ಮತ್ತು ವಾರಂಟ್ ಅಲ್ಲ ಎಂದಿದ್ದಾರೆ.

ಸಿಎಂ ಯಡಿಯೂರಪ್ಪ ಹಾಗೂ ನಿರಾಣಿ ಅರ್ಜಿಗಳ ಪರಿಶೀಲನೆಗೆ ಒಪ್ಪಿರುವ ಕೋರ್ಟ್ ಯಾವ ಕಾರಣದಿಂದಲೂ ಆರೋಪಿಗಳನ್ನು ಬಂಧಿಸಬಾರದೆಂದು ತನಿಖಾಧಿಕಾರಿಗಳಿಗೆ ಸೂಚಿಸಿದೆ.