ಕೆಲಸದ ಒತ್ತಡಕ್ಕೆ ಬಲಿಯಾದ್ರ ಆರೋಗ್ಯಾಧಿಕಾರಿ ? ವಾರಿಯರ್ಸ್ ಗಳಲ್ಲಿ ಮನವಿ ಮಾಡಿದ ಡಾ.ಸುಧಾಕರ್

0

ಮೈಸೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲೀಗ ಕೊರೊನಾ ವಾರಿಯರ್ಸ್ ಗಳ ಮೇಲೆ ಕೆಲಸದ ಒತ್ತಡ ಹೆಚ್ಚುತ್ತಿದ್ಯಾ ? ಹೀಗೊಂದು ಅನುಮಾನ ವ್ಯಕ್ತವಾಗುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ತಾಲೂಕು ಆರೋಗ್ಯಾಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಡಾ.ನಾಗೇಂದ್ರ ಎಂಬವರೇ ಆತ್ಮಹತ್ಯೆಗೆ ಶರಣಾದವರು. ಕಳೆದೊಂದು ವರ್ಷದಿಂದಲೂ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದು, ಇಂದು ಮೈಸೂರಿನ ಆಲನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಡಾ.ನಾಗೇಂದ್ರ ಅವರ ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಕೆಲಸದ ಒತ್ತಡದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನುವ ಮಾತುಗಳು ಕೇಳಿಬರುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು ಡಾ.ನಾಗೇಂದ್ರ ಅವರ ಆತ್ಮಹತ್ಯೆ ವಿಚಾರ ತನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೇ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. ಆದರೆ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಇನ್ನು ಉನ್ನತ ಶಿಕ್ಷಣ ಸಚಿವ ಡಾ.ಡಿ.ಸುಧಾಕರ್ ಕೂಡ ಟ್ವಿಟ್ ಮಾಡಿದ್ದು, ಡಾ.ನಾಗೇಂದ್ರ ಅವರ ಸಾವು ತನಗೆ ಅತ್ಯಂತ ಬೇಸರವನ್ನು ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್ ಗಳೇ ನಿಮಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ಕೂಡ ನಿಮ್ಮ ಮೇಲಾಧಿಕಾರಿಗಳ ಜೊತೆಗೆ ಹಂಚಿಕೊಳ್ಳಿ. ನಿಮ್ಮ ಕಷ್ಟಗಳಿಗೆ ಸರಕಾರ ಯಾವತ್ತೂ ನಿಮ್ಮ ಜೊತೆಗೆ ಇರುತ್ತೆ ಎಂದು ಹೇಳಿದ್ದಾರೆ.

Leave A Reply

Your email address will not be published.