ಕಾರವಾರ : ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಗಾಯಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಡಿನಬಾಳ ಬ್ರಿಡ್ಜ್ ಬಳಿಯಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಸಂಚರಿಸುತ್ತಿದ್ದ ಬೈಕ್ ಗೆ ಇನ್ನೊಂದು ಬೈಕ್ ಢಿಕ್ಕಿ ಹೊಡೆದಿದೆ. ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಯನ್ನು ಕೊಡಿಸಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯಕ್ಕೆ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಸಣ್ಣಪುಟ್ಟ ಶಸ್ತ್ರ ಚಿಕಿತ್ಸೆ ನಡೆಸುವ ಸಾಧ್ಯತೆಯಿದೆ. ಆದರೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹಿರಿಯ ಭಾಗವತ ಸದಾಶಿವ ಅಮೀನ್ ಅವರು ತಿಳಿಸಿದ್ದಾರೆ.
ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಹಿರಿಯ ಪುತ್ರ ಸುಬ್ರಹ್ಮಣ್ಯ ಚಿಟ್ಟಾಣಿ ಆದಷ್ಟು ಬೇಗ ಚೇತರಿಸಿಕೊಂಡು ರಂಗದ ಮೇಲೆ ಕಾಣಿಸಿಕೊಳ್ಳಲಿ ಅಂತಾ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.