ಜಮೀರ್ ಅಹಮದ್ ಖಾನ್ ವರ್ತನೆಗೆ ಕಾಂಗ್ರೆಸ್ ನಲ್ಲೇ ಅಪಸ್ವರ !

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋದು ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ. ಆದ್ರೆ ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ವರ್ತನೆಗೆ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿಯೂ ಅಪಸ್ವರ ಕೇಳಿಬಂದಿದೆ.

ಕೊರೊನಾ ಹಿನ್ನೆಲೆಯಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆಗೆ ಮುಂದಾಗಿದ್ದ ಆಶಾ ಕಾರ್ಯಕರ್ತೆಯೋರ್ವರಿಗೆ ಬೆಂಗಳೂರಿನ ಸಾರಾಯಿ ಪಾಳ್ಯದ ಸಾಧಿಕ್ ನಗರ ಲೇಔಟ್ ನಲ್ಲಿ ಹಲ್ಲೆ ನಡೆಸಲಾಗಿತ್ತು.

ಈ ಪ್ರಕರಣ ರಾಜ್ಯದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಈ ಘಟನೆಯ ಕುರಿತು ಶಾಸಕ ಜಮೀರ್ ಅಹಮದ್ ಖಾನ್ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸೋದಕ್ಕೆ ತೆರಳಿದ್ದ ಆರೋಗ್ಯ ಇಲಾಖೆ, ಬಿಬಿಎಂಪಿ ಹಾಗೂ ಪೊಲೀಸ್ ಸಿಬ್ಬಂಧಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು.

9 ಮಂದಿಗೆ ಕೊರೊನಾ ಸೋಂಕು ಕಾಣಸಿಕೊಂಡಿರೋ ಹಿನ್ನೆಲೆಯಲ್ಲಿ ಇಡೀ ಪಾದರಾಯನಪುರ ಏರಿಯಾವನ್ನೇ ಸೀಲ್ ಡೌನ್ ಮಾಡಲಾಗಿತ್ತು. ಆದರೂ ಪುಂಡರಗುಂಪೊಂದು ರಂಪಾಟ ನಡೆಸಿತ್ತು. ಘಟನೆಯಿಂದಾಗಿ ಜನರು ಬೆಚ್ಚಿಬಿದ್ದಿದ್ದರು. ಆದರೆ ತನ್ನ ಕ್ಷೇತ್ರದ ಜನರನ್ನು ಸರಿದಾರಿಗೆ ತೆರಬೇಕಾಗಿದ್ದ ಜಮೀರ್ ಅಹಮದ್ ಖಾನ್ ಮಾತ್ರ ಪುಂಡರ ರಂಪಾಟವನ್ನು ಸಮರ್ಥಿಸಿಕೊಳ್ಳೋ ರೀತಿಯಲ್ಲಿ ಹೇಳಿಕೆ ನೀಡಿ ಇದೀಗ ಭಾರೀ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ..

ಜಮೀರ್ ಅಹಮದ್ ಖಾನ್ ಬೇಜಾವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರೋದು ಇದೇ ಮೊದಲೇನಲ್ಲಾ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗಲೂ ಜಮೀರ್ ಅಹಮದ್ ವಿರುದ್ದ ಹಲವು ಆರೋಪಗಳೂ ಕೇಳಿಬಂದಿತ್ತು. ಕುಮಾರ ಸ್ವಾಮಿ ಅವರ ಮೇಲೆ ಮುನಿಸಿಕೊಂಡ ಜಮೀರ್ ಮಾಜಿ ಸಿಎಂ ಸಿದ್ದರಾಮಯ್ಯರ ಕೃಪಾಕಟಾಕ್ಷದಿಂದ ಕಾಂಗ್ರೆಸ್ ಸೇರಿದ್ದಾರೆ. ಅಲ್ಲದೇ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಚಿವರೂ ಆಗಿದ್ದರು. ಆದ್ರೀಗ ಕೊರೊನಾ ವಿಚಾರದಲ್ಲಿ ಜಮೀರ್ ಅಹಮದ್ ನಡೆದುಕೊಳ್ಳುತ್ತಿರೋ ವರ್ತನೆ ಕಾಂಗ್ರೆಸ್ ನಾಯಕರಿಗೆ ಮುಜುಗರವನ್ನು ತಂದಿದೆ.

ಹೀಗಾಗಿಯೇ ಹಲವರು ಹಿರಿಯ ನಾಯಕರು ಕೂಡ ಕಾಂಗ್ರೆಸ್ ಆಂತರಿಕವಲಯದಲ್ಲಿ ಜಮೀರ್ ವಿರುದ್ದ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿರೋ ಡಿ.ಕೆ.ಶಿವಕುಮಾರ್ ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದೆ. ಆದರೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಕೊರೊನಾ ಹರಡುವುದಕ್ಕೆ ಪ್ರಚೋದಿಸುವ ವರ್ತನೆ ತೋರಿಸುತ್ತಿದ್ದಾರೆ. ಶಾಸಕ ಜಮೀರ್ ಅಹಮದ್ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದ್ದು, ಕೆಲ ಕಾಂಗ್ರೆಸ್ ಮುಖಂಡರು ತಮ್ಮ ಅಸಮಾಧಾನವನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆನ್ನಲಾಗುತ್ತಿದೆ.

Leave A Reply

Your email address will not be published.