ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ : ಸಚಿವ ಶ್ರೀನಿವಾಸ ಪೂಜಾರಿ ಮನವಿಗೆ ಸಿಎಂ ಭರವಸೆ

ಉಡುಪಿ : ಬಿಲ್ಲವ ಸಮುದಾಯದ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯಗಳನ್ನು ನೀಡಲು ಈ ಬಾರಿಯ ಬಜೆಟ್ ನಲ್ಲಿ 50 ಕೋಟಿ ರೂಪಾಯಿಯನ್ನು ಮೀಸಲಿಡುವಂತೆ ಮೀನುಗಾರಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಾದ್ಯಂತ ಇರುವ ಬಿಲ್ಲವ ಸಮುದಾಯದ ಜೊತೆಗೆ ಈಡಿಗ, ನಾಮಧಾರಿ ಇನ್ನಿತರ ಉಪಪಂಗಡಗಳ ಮಹಿಳೆಯರಿಗೆ
ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲು 50 ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನಿಯೋಗದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿಯ ಮಂಗಳೂರು ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಬಿಲ್ಲವ ಸಮಾಜದ ಮುಖಂಡರಾದ ಬಿ.ಎನ್. ಶಂಕರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Comments are closed.