ಸೋಮವಾರ, ಏಪ್ರಿಲ್ 28, 2025
HomeBreakingYogesh Murder: ಯೋಗೇಶ್ ಗೌಡ ಕೊಲೆ ಪ್ರಕರಣ…! ವಿನಯ ಕುಲಕರ್ಣಿ ಆಪ್ತ ಕೆಎಎಸ್ ಅಧಿಕಾರಿ ಸೋಮು...

Yogesh Murder: ಯೋಗೇಶ್ ಗೌಡ ಕೊಲೆ ಪ್ರಕರಣ…! ವಿನಯ ಕುಲಕರ್ಣಿ ಆಪ್ತ ಕೆಎಎಸ್ ಅಧಿಕಾರಿ ಸೋಮು ಆರೇಸ್ಟ್….!!

- Advertisement -

ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಮಾಜಿ ಸಚಿವ ವಿನಯ್ ಕುಲಕರ್ಣಿ ಕುತ್ತಿಗೆಗೆ ಉರುಳಾಗೋ ಲಕ್ಷಣ ದಟ್ಟವಾಗಿದೆ. ಅತ್ತ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಕೋರಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರೇ, ಇತ್ತ ವಿನಯ್ ಕುಲಕರ್ಣಿ ಆಪ್ತನನ್ನು ಸಿಬಿಐ ಬಂಧಿಸಿದೆ.  

ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಗದಗದ ಅವರ ನಿವಾಸದಿಂದ ಸಿಬಿಐ ಗುರುವಾರ ಮುಂಜಾನೆ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡಅವರಿಗೆ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ವಿಚಾರ ಗೊತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.

ವಶಕ್ಕೆ ಪಡೆದ ಸೋಮು ನ್ಯಾಮಗೌಡ ಅವರನ್ನು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಸಿಬಿಐ ತನಿಖೆ ಮುಂದುವರೆಸಿದೆ.

ಈ ಮಧ್ಯೆ ಸಿಬಿಐ ತಮ್ಮ ಮೇಲೆ ದಾಖಲಿಸಿರುವ ಎಫ್.ಆಯ್.ಆರ್ ರದ್ದುಗೊಳಿಸುವಂತೆ ಕೋರಿರುವ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆಗೆ ಬರಲಿದೆ.

RELATED ARTICLES

Most Popular